ಬೆಂಗಳೂರು:ಕೆಂಪು ಕೋಟೆ ಮೇಲೆ ಬೇರೆ ಧ್ವಜ ಹಾರಿಸಿದವರು ಆರ್ಎಸ್ಎಸ್ ಮೂಲದವರು ಎಂದು ಸಾಮಾಜಿಕ ಜಾಲತಾಣದಲ್ಲಿ ಬರುತ್ತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಕೆಂಪು ಕೋಟೆ ಮೇಲೆ ಬೇರೆ ಧ್ವಜ ಹಾರಿಸಿದವರು ಆರ್ಎಸ್ಎಸ್ ಮೂಲದವರು: ಉಗ್ರಪ್ಪ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನು ಹಿಂಪಡೆಯುವ ಬದಲು ಹೋರಾಟನಿರತ ರೈತರ ಹೆಸರು ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.
ಮಾಜಿ ಸಂಸದ ವಿ.ಎಸ್.ಉಗ್ರಪ್ಪ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ರೈತ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ದೇಶದಲ್ಲಿ ರೈತ ವಿರೋಧಿ ಸರ್ಕಾರವಿದ್ದು, ಕೇವಲ ಬಂಡವಾಳಶಾಹಿಗಳಿಗೆ ಅನುಕೂಲ ಆಗುತ್ತಿದೆ. ಅಂಬಾನಿ, ಅದಾನಿ ಅಣತಿಯಂತೆ ಕೇಂದ್ರ ವರ್ತಿಸುತ್ತಿದೆ. ನಿನ್ನೆ ಪ್ರತಿಭಟನೆಗೆ ಮಸಿ ಬಳಿಯುವ ಕೆಲಸ ನಡೆದಿದೆ.
ಬಿ.ಸಿ.ಪಾಟೀಲ್ ರೈತರನ್ನು ಭಯೋತ್ಪಾದಕರು ಎಂದು ಹೇಳಿ ಅವಮಾನಿಸಿದ್ದಾರೆ. ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Jan 27, 2021, 5:14 PM IST