ಬೆಂಗಳೂರು:ನಮಗೆ ಯಾರ ಮತವೂ ಬೇಡ. ನಮ್ಮ ಮತ ಒಂದೇ ಸಾಕು. ರಾಜ್ಯಸಭೆಗೆ ಮೂವರು ಅಭ್ಯರ್ಥಿಗಳನ್ನು ಹಾಕಿದ್ದೇವೆ. ಈ ಚುನಾವಣೆಯಲ್ಲಿ ನಾವು ಗೆಲ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯಾರ ಸಹಾಯ ಇಲ್ಲದೆಯೇ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ: ಬಿಎಸ್ವೈ - ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ
ರಾಜ್ಯಸಭೆಗೆ ಮೂವರು ಅಭ್ಯರ್ಥಿಗಳನ್ನು ಹಾಕಿದ್ದೇವೆ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಗೆಲ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ 122 ಮತಗಳಿವೆ. ನೂರಕ್ಕೆ ನೂರು ನಮ್ಮ ಮೂರೂ ಅಭ್ಯರ್ಥಿಗಳು ಗೆಲ್ತಾರೆ. ಬೇರೆಯವರ ಸಹಾಯ ಇಲ್ಲದೇ, ಲೆಹರ್ ಸಿಂಗ್ ಸೇರಿ ನಮ್ಮ ಮೂವರು ಅಭ್ಯರ್ಥಿಗಳೂ ಗೆಲ್ತಾರೆ. ನಮಗೆ ಯಾರ ಸಹಾಯನೂ ಬೇಕಾಗಲ್ಲ. ನಮ್ಮ ಮತಗಳಲ್ಲೇ ನಮ್ಮ ಮೂರೂ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಆದಿಚುಂಚನಗಿರಿ ಶ್ರೀಗಳೊಂದಿಗೆ ನಾಗೇಶ್ ಚರ್ಚಿಸಿದ್ದಾರೆ - ಗೃಹ ಸಚಿವ