ಬೆಂಗಳೂರು:ನಮ್ಮ ದೇಶ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸುತ್ತಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದೆ: ಡಿಸಿಎಂ ಅಶ್ವತ್ಥ ನಾರಾಯಣ - ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಲಿದೆ
ನಮ್ಮ ದೇಶ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸುತ್ತಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ 2019-20ರ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ಎಸ್ಎಸ್ , ಸ್ಕೌಟ್ಸ್ ಆ್ಯಂಡ್ ಗೈಡ್ಸ್, ರೆಡ್ ಕ್ರಾಸ್ ಹಾಗೂ ಎನ್ಸಿಸಿ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡೆ ,ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಅವರು ಮತ್ತಷ್ಟು ಸಾಧನೆ ಮಾಡುವ ಕಾರ್ಯಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಾವು ಒದಗಿಸುತ್ತೇವೆ ಎಂದು ಭರವಸೆ ನೀಡಿದ್ರು.
ನಾವೆಲ್ಲಾ ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು. ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಅವರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳಾಗಿ ರೂಪಿಸುವ ಪ್ರಯತ್ನ ಮಾಡೋಣ ಎಂದರು.