ಕರ್ನಾಟಕ

karnataka

ETV Bharat / state

ಡಾ. ಜಿ. ಪರಮೇಶ್ವರ್​ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಗೆ ಕೈ ನಾಯಕರ ಖಂಡನೆ - ರಾಜಕೀಯ ದ್ವೇಷದ ಐಟಿ ದಾಳಿ

ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಐಟಿ ದಾಳಿಗೆ ಕಾಂಗ್ರೆಸ್​ ಹಿರಿಯ ನಾಯಕರಾದ ಹೆಚ್​. ಕೆ. ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿ ವಿರುದ್ಧ ಕೈ ನಾಯಕರ ಆಕ್ರೋಶ

By

Published : Oct 10, 2019, 12:42 PM IST

ಬೆಂಗಳೂರು: ಡಾ. ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು‌, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಟಿ ದಾಳಿ ವಿರುದ್ಧ ಕೈ ನಾಯಕರ ಆಕ್ರೋಶ

ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ದಾಳಿ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಪರಮೇಶ್ವರ್ ನಿವಾಸದ ಮೇಲಿನ ಐಟಿ ದಾಳಿ ಖಂಡನೀಯ ಎಂದು ಕಿಡಿಕಾರಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿಯವರ ಮೇಲೆ ಯಾವ ದಾಳಿಯೂ ನಡೆಯುವುದಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂಥ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಎಂದರು.

ಇದೇ ವೇಳೆ ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧಕ್ಕೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ, ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಮಾಧ್ಯಮಗಳಿಗೆ ಪ್ರವೇಶವಿತ್ತು. ಏಕಾಏಕಿ‌ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದರು.

ABOUT THE AUTHOR

...view details