ಕರ್ನಾಟಕ

karnataka

ETV Bharat / state

ಮುಕುಡಪ್ಪ ಮನೆ ಬಾಗಿಲಿಗೆ ಕಪ್ಪು ಮಸಿ ಬಳಿದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ - Outrage of Congress leaders against Mukudappa

ಬುಧವಾರ ಮಾಧ್ಯಮಗೋಷ್ಟಿ ಪ್ರಾರಂಭಕ್ಕೂ ಮುನ್ನ ಅನೌಪಚಾರಿಕವಾಗಿ ಮಾತನಾಡುತ್ತಿದ್ದ ವೇಳೆ ಅವಹೇಳನಕಾರಿ ಪದಗಳನ್ನು ಬಳಸಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು.

Outrage of Congress leaders against Mukudappa
ಮುಕುಡಪ್ಪ ವಿರುದ್ಧ ಕಾಂಗ್ರೆಸ್​ ನಾಯಕರ ಆಕ್ರೋಶ

By

Published : Nov 10, 2022, 1:16 PM IST

Updated : Nov 10, 2022, 2:33 PM IST

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾಗಿ ಅವಹೇಳನಕಾರಿ ಮಾತು ಆಡಿದ ಹಿನ್ನೆಲೆ ಕುರುಬ ನಾಯಕ ಮುಕುಡಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಮುಕುಡಪ್ಪ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರು ಮುಕುಡಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಮಸಿ ಬಳಿದು ಆಕ್ರೋಶ:ಮುಕಡಪ್ಪನ ಮನೆಗೆ ಮುತ್ತಿಗೆ ಹಾಕಿದ ಸಿದ್ದರಾಮಯ್ಯ ಬೆಂಬಲಿಗರು ಮುಕಡಪ್ಪ ಮನೆಯಲ್ಲಿ ಇಲ್ಲದ ಕಾರಣ ಮನೆಗೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೇ ಮುಕಡಪ್ಪನ ಪೋಸ್ಟರ್​ಗೂ ಮಸಿ ಬಳಿದು ಪ್ರತಿಭಟನೆ ಮಾಡಿದ್ದಾರೆ. ಹಿಂದುಳಿದ ಹಾಗೂ ದಲಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಕೆ.‌ಮುಕುಡಪ್ಪ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮುಕುಡಪ್ಪ ವಿರುದ್ಧ ಕಾಂಗ್ರೆಸ್​ ನಾಯಕರ ಆಕ್ರೋಶ

ಬೆಂಗಳೂರಿನ ಖಾಸಗಿ ಹೋಟೆಲ್​ ನಲ್ಲಿ ನಿನ್ನೆ ಮಾಧ್ಯಮಗೋಷ್ಟಿಗೂ ಮುನ್ನ ಅನೌಪಚಾರಿಕವಾಗಿ ಮಾತನಾಡುತ್ತಿದ್ದ ವೇಳೆ ಅವರು ಅವಹೇಳನಕಾರಿ ಪದಗಳನ್ನು ಬಳಸಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿತ್ತು ಎನ್ನಲಾಗ್ತಿದೆ. ಈ ಹಿನ್ನೆಲೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಮುಕುಡಪ್ಪ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಹೆಚ್ಚಿನ ಕುರುಬರ ಬೆಂಬಲ ಈಶ್ವರಪ್ಪ ಅವರಿಗಿದೆ: ಮುಕುಡಪ್ಪ

Last Updated : Nov 10, 2022, 2:33 PM IST

ABOUT THE AUTHOR

...view details