ಕರ್ನಾಟಕ

karnataka

ETV Bharat / state

ಐಟಿಸಿ ಕಂಪನಿ ವಿರುದ್ಧ ಭುಗಿಲೆದ್ದ ಆಕ್ರೋಶ: ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ - protest by Kannada organizations

ಕನ್ನಡ ರಾಜ್ಯೋತ್ಸವವನ್ನು ಐಟಿಸಿ ಕಂಪನಿಯಲ್ಲಿ ಆಚರಿಸಿದರು ಎಂಬ ಕಾರಣ, ನವೀನ್ ಮಲ್ಲೇನಹಳ್ಳಿ ಅವರನ್ನು ಐಟಿಸಿ ಇನ್ಫೋಟೆಕ್ ಸಂಸ್ಥೆ ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಐಟಿಸಿ ಕಂಪನಿಯ ವಿರುದ್ಧ ಭುಗಿಲೆದ್ದ ಆಕ್ರೋಶ : ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

By

Published : Oct 17, 2019, 3:27 PM IST

ಬೆಂಗಳೂರು: ಕನ್ನಡ ರಾಜ್ಯೋತ್ಸವವನ್ನು ಐಟಿಸಿ ಕಂಪನಿಯಲ್ಲಿ ಆಚರಿಸಿದರು ಎಂಬ ಕಾರಣ ಹಾಗು ನವೀನ್ ಮಲ್ಲೇನಹಳ್ಳಿ ಅವರನ್ನು ಐಟಿಸಿ ಇನ್ಫೋಟೆಕ್ ಸಂಸ್ಥೆ ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇನ್ನಿತರ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಐಟಿಸಿ ಕಂಪನಿಯ ವಿರುದ್ಧ ಭುಗಿಲೆದ್ದ ಆಕ್ರೋಶ : ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬಾಣಸವಾಡಿಯಲ್ಲಿರುವ ಐಟಿಸಿ ಇನ್ಫೋಟೆಕ್ ಸಂಸ್ಥೆಯ ಮುಂದೆ ವಿವಿಧ ಜಿಲ್ಲೆಗಳ ಹಾಗೂ ನಗರದ ಕನ್ನಡಿಪರ ಸಂಘಟನೆಗಳು ಕೆಲಸದಿಂದ ತೆಗೆದಿರುವ ನವೀನ್ ಮಲ್ಲೆನಹಳ್ಳಿ ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಪಟ್ಟು ಹಿಡಿದರು. ಪ್ರತಿಭಟನೆಯಲ್ಲಿ ಸಾರಾ ಗೋವಿಂದ್, ಪ್ರವೀಣ್ ಶೆಟ್ಟಿ ಹಾಗೂ ಕಾರ್ಯಕರ್ತರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೂ ಮುನ್ನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಬೈಕ್ ರ್ಯಾಲಿ ನಡೆಸಿದರು. ಕನ್ನಡಿಗರಿಗೆ ಯಾವುದೇ ಕಾರಣಕ್ಕೂ ಅವಮಾನ ಮಾಡಬಾರದು. ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶ ನೀಡಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಐಟಿಸಿ ಕಂಪನಿಗೆ ಪೊಲೀಸ್​ ಭದ್ರತೆ ಒದಗಿಸಲಾಗಿತ್ತು. ಪ್ರತಿಭಟನೆ ವಿಷಯ ತಿಳಿದು ಐಟಿಸಿ ಕಂಪನಿಯ ಜನರಲ್ ಮ್ಯಾನೇಜರ್ ಕೋದಂಡ ರಾಮ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು.

ABOUT THE AUTHOR

...view details