ಬೆಂಗಳೂರು:ಕೊರೊನಾ ಮೂರನೇ ಅಲೆ ಬರಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕವನ್ನ ಕಳುಹಿಸುತ್ತಿದೆ. ಸುಮಾರು ಒಂದು ತಿಂಗಳ ಹಿಂದೆ ಆಮ್ಲಜನಕ ಇಲ್ಲದೆ ಸಾವಿರಾರು ಸೋಂಕಿತರು ಉಸಿರು ಚೆಲ್ಲಿದ್ದರು. ಈ ರೀತಿಯ ಘಟನೆಗಳು ಮತ್ತೆ ಮರುಕಳಿಸಬಾರದು ಎಂದು ಕೇಂದ್ರ ಸರ್ಕಾರ ರಾಜ್ಯಕ್ಕೆ ಸುಮಾರು 2,784 ಟನ್ ಪ್ರಾಣವಾಯುವನ್ನು ಕಳುಹಿಸಿದೆ.
24ನೇ ಆಕ್ಸಿಜನ್ ಎಕ್ಸ್‌ಪ್ರೆಸ್ ನಿನ್ನೆ ರಾತ್ರಿ 11:45ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಜೂನ್ 1ರಂದು ಸಂಜೆ 06:45ಕ್ಕೆ ಗುಜರಾತ್‌ನ ಕಾನಾಲಸ್‌ನಿಂದ ಲೋಡ್ ಆಗಿ ಟ್ರೈನ್ ಹೊರಟಿತ್ತು.