ಬೆಂಗಳೂರು:ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಾಳೆ ಫ್ರೀಂಡಂಪಾರ್ಕ್ನಲ್ಲಿ ನಡೆಯುವ ಪ್ರತಿಭಟನೆಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಬೆಂಗಳೂರಿಗೆ ಬರಲಿದ್ದಾರೆ.
ಸಿಎಎ ವಿರೋಧಿಸಿ ಪ್ರತಿಭಟನೆ, ನಾಳೆ ಬೆಂಗಳೂರಿಗೆ ಒವೈಸಿ ಭೇಟಿ: ಶಾಂತಿಯುತವಾಗಿ ಪ್ರತಿಭಟಿಸುವಂತೆ ಪೊಲೀಸರ ಎಚ್ಚರಿಕೆ
ನಾಳೆ ಫ್ರೀಡಂ ಪಾರ್ಕ್ನಲ್ಲಿ ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ, ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಬೆಂಗಳೂರಿಗೆ ಬರಲಿದ್ದಾರೆ.
ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳು ನಾಳೆ ಸಂಜೆ 4 ಗಂಟೆಗೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು 4 ರಿಂದ 5 ಸಾವಿರ ಪ್ರತಿಭಟನಾಕಾರರು ಸೇರುವ ಸಾಧ್ಯತೆಯಿದೆ.
ಪ್ರತಿಭಟನೆಯನ್ನುಶಾಂತಿಯುತವಾಗಿ ನಡೆಸಬೇಕೆಂದು ಈಗಾಗಲೇ ಆಯೋಜಕರಿಗೆ ಸೂಚಿಸಲಾಗಿದೆ. ಅಲ್ಲದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಾಹನ ಸಂಚಾರಕ್ಕೆ ಯಾವುದೇ ಅಡೆತಡೆಯಾಗದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಬೇಕು ಎಂದು ಷರತ್ತುಗಳನ್ನು ವಿಧಿಸಲಾಗಿದೆ. ಒಂದು ವೇಳೆ ನಿಯಮ ಮೀರಿದರೆ ಆಯೋಜರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಹೇಳಿದ್ದಾರೆ.