ಕರ್ನಾಟಕ

karnataka

ಪಾಕ್​ ತಂದೆ, ಭಾರತದ ತಾಯಿ.. ದುಬೈನಲ್ಲಿ ಮಕ್ಕಳ ಜನನ, ಇಂಡಿಯನ್​ ಪೌರತ್ವಕ್ಕೆ ಸಲ್ಲಿಸಿದ ಅರ್ಜಿ ವಜಾ

By

Published : Apr 6, 2023, 6:56 AM IST

ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದ ಪಾಕಿಸ್ತಾನದ ಇಬ್ಬರು ಮಕ್ಕಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ..

Pakistan two children submitted  Indian citizenship application  Indian citizenship application was rejected  ಪಾಕಿಸ್ತಾನದ ಇಬ್ಬರು ಮಕ್ಕಳ ಅರ್ಜಿ  ಭಾರತೀಯ ಪೌರತ್ವಕ್ಕಾಗಿ ಅರ್ಜಿ  ಪಾಕಿಸ್ತಾನದ ಇಬ್ಬರು ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾ  ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್  ಪೌರತ್ವವನ್ನು ತ್ಯಜಿಸಲು 21 ವರ್ಷ ವಯಸ್ಸಾಗಬೇಕು  ಭಾರತದ ಪೌರತ್ವ ನೀಡಲು ನಿರ್ದೇಶನ  ದುಬೈನಲ್ಲಿರುವ ಪಾಕಿಸ್ತಾನದ ಪ್ರೆಜೆ
ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಪೌರತ್ವವನ್ನು ತ್ಯಜಿಸಲು 21 ವರ್ಷ ವಯಸ್ಸಾಗಬೇಕು ಎಂದು ಪಾಕಿಸ್ತಾನ ತಿಳಿಸಿರುವ ಸಂದರ್ಭದಲ್ಲಿ ಪಾಕಿಸ್ತಾನದ ತಂದೆ ಮತ್ತು ಭಾರತದ ತಾಯಿಗೆ ದುಬೈನಲ್ಲಿ ಜನಿಸಿರುವ ಇಬ್ಬರು ಅಪ್ರಾಪ್ತ ಮಕ್ಕಳಿಗೆ 21 ವರ್ಷಕ್ಕಿಂತಲೂ ಮುನ್ನ ಭಾರತದ ಪೌರತ್ವ ನೀಡಲು ನಿರ್ದೇಶನ ನೀಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬೆಂಗಳೂರಿನಲ್ಲಿ ನೆಲೆಸಿರುವ 17 ಮತ್ತು 14 ವರ್ಷದ ಇಬ್ಬರು ಪಾಕಿಸ್ತಾನದ (ಅಪ್ರಾಪ್ತ ಮಕ್ಕಳು) ಪ್ರಜೆಗಳು ಸಲ್ಲಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪಾಕಿಸ್ತಾನದ ಪೌರತ್ವ ತ್ಯಜಿಸಲು 21 ವರ್ಷ ಆಗಬೇಕು ಎಂದು ತಿಳಿಸಿರುವಾಗ, ಮತ್ತೊಂದು ದೇಶ ಅಪ್ರಾಪ್ತರಿಗೆ ಪೌರತ್ವ ನೀಡುವುದಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದೆ. ಅಲ್ಲದೆ, ಪಾಕಿಸ್ತಾನದ ಪೌರತ್ವ ತ್ಯಜಿಸಬೇಕಾದಲ್ಲಿ 21 ವರ್ಷ ಕಳೆದಿರಬೇಕು ಎಂದಿರುವಾಗ, ಭಾರತದ ಕಾನೂನುಗಳು ಹೊಂದಿಕೊಳ್ಳಲು ಸಾಧ್ಯವಿಲ್ಲ. ಜತೆಗೆ, ಪಾಕಿಸ್ತಾನದ ಪೌರತ್ವವನ್ನು ತ್ಯಜಿಸಿದ ಬಳಿಕವೇ ಅರ್ಜಿದಾರ ಮಕ್ಕಳು ಭಾರತದ ಪೌರತ್ವ ಕೋರಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ?: ಭಾರತದ ಮೂಲದ ಅಮೀನಾ ಎಂಬುವರು ದುಬೈನಲ್ಲಿರುವ ಪಾಕಿಸ್ತಾನದ ಪ್ರೆಜೆಯಾದ ಅಸ್ಸಾದ್ ಮಲ್ಲಿಕ್ ಎಂಬುವರನ್ನು 2002ರಲ್ಲಿ ಷರಿಯಾ ಕಾನೂನಿನ ಪ್ರಕಾರ ವಿವಾಹವಾಗಿದ್ದರು. ದಂಪತಿಗೆ 2004 ಮತ್ತು 2008ರಲ್ಲಿ ಇಬ್ಬರು ಮಕ್ಕಳು ದುಬೈನಲ್ಲಿ ಜನಿಸಿದ್ದರು. ಈ ದಂಪತಿ ದುಬೈ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದಿದ್ದರು. ಜತೆಗೆ ಮಕ್ಕಳ ಮೇಲಿನ ಹಕ್ಕನ್ನು ತಾಯಿ(ಅಮೀನಾ)ಗೆ ಬಿಟ್ಟುಕೊಟ್ಟಿದ್ದರು. ಈ ಮಕ್ಕಳು ದುಬೈನಲ್ಲಿ ಉದ್ಯೋಗದಲ್ಲಿದ್ದ ತಾಯಿಯೊಂದಿಗೆ ನೆಲೆಸಿದ್ದರು.

ಅಮೀನಾ ಅವರು ದುಬೈನಲ್ಲಿ ಜೀವನ ನಡೆಸುವುದಕ್ಕೆ ಸಾಧ್ಯವಾಗದ ಕಾರಣ ಮಕ್ಕಳೊಂದಿಗೆ ಬೆಂಗಳೂರಿನಲ್ಲಿದ್ದ ತನ್ನ ಪೋಷಕರ ಮನೆಗೆ 2021ರಲ್ಲಿ ಹಿಂದಿರುಗಲು ಮುಂದಾಗಿದ್ದರು. ಇದಕ್ಕಾಗಿ ಪಾಕಿಸ್ತಾನಿ ಪ್ರಜೆಗಳಾಗಿದ್ದ ಮಕ್ಕಳ ಪಾಸ್‌ಪೋರ್ಟ್ ಹೊಂದಿದ್ದ ಪರಿಣಾಮ ಮಕ್ಕಳನ್ನು ಭಾರತಕ್ಕೆ ಕರೆತರಲು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಮಾಡಿದ್ದರು.

ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳು ಅರ್ಜಿದಾರರಿಗೆ ಪಾಕಿಸ್ತಾನದ ಪಾಸ್‌ಪೋರ್ಟ್‌ನ್ನು ಹಿಂದಿರುಗಿಸಿದ ಬಳಿಕ ಅವರ ಪೌರತ್ವದ ಕುರಿತು ಮುಂದಿನ ನಿರ್ಧಾರ ತೆಗೆದುಕೊಳ್ಳುಬೇಕು ಎಂಬ ಷರತ್ತನ್ನು ವಿಧಿಸಿ ಮಾನವೀಯತೆ ದೃಷ್ಠಿಯಿಂದ ತಾತ್ಕಾಲಿಕವಾಗಿ ಭಾರತ ಪ್ರವೇಶಕ್ಕೆ ಪಾಸ್​​ಪೋರ್ಟ್ ನೀಡಿದ್ದರು. ಆದರೆ ದುಬೈನಲ್ಲಿರುವ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ರಾಯಭಾರಿ ಕಚೇರಿಯ ಅಧಿಕಾರಿಗಳು ಇಬ್ಬರು ಅಪ್ರಾಪ್ತರಿಗೆ ಭಾರತದ ಪೌರತ್ವ ನೀಡುವುದಕ್ಕೆ ನಮಗೆ ಅಡ್ಡಿಯಿಲ್ಲ. ಆದರೆ, ಪಾಕಿಸ್ತಾನ ಪೌರತ್ವ ಕಾಯ್ದೆ ಪ್ರಕಾರ ಪಾಕಿಸ್ತಾನದ ಪೌರತ್ವ ತ್ಯಜಿಸಬೇಕಾದರೆ 21 ವರ್ಷ ವಯಸ್ಸಾಗುವವರೆಗೂ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಮನವಿ ತಿರಸ್ಕರಿಸಿದ್ದ ಗೃಹ ವ್ಯವಹಾರಗಳ ಸಚಿವಾಲಯ: ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಅಮೀನಾ ಅವರು ತಮ್ಮ ಇಬ್ಬರೂ ಮಕ್ಕಳಿಗೆ ಭಾರತದ ಪೌರತ್ವ ನೀಡಬೇಕು ಎಂದು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಸಂಬಂಧ ಕೇಂದ್ರ ಗೃಹ ಇಲಾಖೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಾರದ ಹಿನ್ನೆಲೆ ತಮ್ಮ ಮಕ್ಕಳಿಗೆ ಭಾರತದ ಪೌರತ್ವ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿ ವಿಚಾರಣಾ ಹಂತದಲ್ಲಿರುವ ಸಂದರ್ಭದಲ್ಲಿ ಗೃಹ ಚಿವಾಲಯ ಅರ್ಜಿಯನ್ನು ತಿರಸ್ಕಸಿರಿತ್ತು. ಈಗ ಹೈಕೋರ್ಟ್​ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಓದಿ:ಕಾವೇರಿ, ಕನ್ನಿಕೆ ನದಿ ಪಾತ್ರ ಸ್ವಚ್ಛಗೊಳಿಸಲು 15 ದಿನ ಕಾಲಾವಕಾಶ ನೀಡಿದ ಹೈಕೋರ್ಟ್

ABOUT THE AUTHOR

...view details