ಬೆಂಗಳೂರು: ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವಿಧಾನಸೌಧದತ್ತ ಮುನ್ನುಗ್ಗುತ್ತಿದೆ. ಪೊಲೀಸ್ ಅನುಮತಿ ಇಲ್ಲದಿದ್ದರೂ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆ ಬಿಡಿಎ ಕಚೇರಿ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ರಸ್ತೆಗೆ ಅಡ್ಡಲಾಗಿ ನಿಂತ ಪೊಲೀಸರು, ಪ್ರತಿಭಟನಾಕಾರರು ಸಿಎಂ ನಿವಾಸದತ್ತ ಹೋಗದಂತೆ ತಡೆಯೊಡ್ಡಿದ್ದಾರೆ. ಕಾವೇರಿ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೆ ನಡೆಯುತ್ತಿರುವ ಪ್ರತಿಭಟನಾ ಮೆರವಣಿಗೆ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಬ್ಯಾರಿಕೇಡ್ ತಳ್ಳಿ ಜಾಥಾ ಮುನ್ನುಗ್ಗುತ್ತಿರುವ ದೃಶ್ಯಗಳು ಕಂಡುಬಂತು.