ಕರ್ನಾಟಕ

karnataka

ETV Bharat / state

ಇನ್ನೆರೆಡು, ಮೂರು ದಿನದಲ್ಲಿ ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭ: ಮುರುಗೇಶ್​ ನಿರಾಣಿ - ಮುರುಗೇಶ್​ ನಿರಾಣಿ

ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಶುಗರ್ಸ್ ಲಿಮಿಟೆಡ್​ಗೆ ಗುತ್ತಿಗೆ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

Murugesh nirani
Murugesh nirani

By

Published : Jun 25, 2020, 7:08 PM IST

ಬೆಂಗಳೂರು:ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಶುಗರ್ಸ್​ಗೆ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು ಇನ್ನೊಂದೆರಡು ದಿನದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲಾಗುತ್ತದೆ ಎಂದು ನಿರಾಣಿ ಶುಗರ್ಸ್ ಲಿಮಿಟೆಡ್ ಅಧ್ಯಕ್ಷ ಮುರಿಗೇಶ್ ನಿರಾಣಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಶುಗರ್ಸ್ ಲಿಮಿಟೆಡ್​ಗೆ ಗುತ್ತಿಗೆ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುರುಗೇಶ್ ನಿರಾಣಿ 405 ಕೋಟಿ ರೂಪಾಯಿಗಳಿಗೆ ಬಿಡ್ ಕರೆದಿದ್ದು 40 ವರ್ಷಗಳಿಗೆ ಸರ್ಕಾರ ಗುತ್ತಿಗೆ ನೀಡಿದೆ ಇದನ್ನು ಕಬ್ಬು ಬೆಳೆಗಾರರು, ರೈತ ಮುಖಂಡರು ಸ್ವಾಗತಿಸಿದ್ದಾರೆ,ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನೌಕರರು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಅಷ್ಟೇ ಅಲ್ಲ ರೈತರು ಹಾಗೂ ಕಬ್ಬು ಬೆಳೆಗಾರರ ಹಿತವನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ತಾವು ಕೂಡ ರೈತ ಕುಟುಂಬದಿಂದ ಬಂದಿದ್ದು ರೈತರ ಕಷ್ಟ ಗೊತ್ತಿದೆ ಎಲ್ಲರ ಸಹಕಾರ ಪಡೆದು ಪಿಎಸ್ಎಸ್‌ಕೆ ಕಾರ್ಖಾನೆಯನ್ನು ಮಾದರಿ ಸಕ್ಕರೆ ಕಾರ್ಖಾನೆ ಮಾಡುವುದಾಗಿ ಮುರುಗೇಶ್ ಭರವಸೆ ನೀಡಿದ್ದಾರೆ.

ಸಂಪುಟ ಸಭೆಯ ನಿರ್ಧಾರದ ಆದೇಶ ಒಂದೆರಡು ದಿನಗಳಲ್ಲಿ ಕೈಸೇರಲಿದೆ ನಂತರ ಅಧಿಕೃತವಾಗಿ ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details