ಬೆಂಗಳೂರು: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿಎಂ ಜೊತೆ ಡಿಸಿಎಂಗೂ ಕೂಡ ಆಹ್ವಾನ ಬಂದಿದೆ.
ಪ್ರಧಾನಿ ಪದಗ್ರಹಣಕ್ಕೆ ಸಿಎಂ ಜತೆ ಡಿಸಿಎಂಗೂ ಆಹ್ವಾನ - ಪ್ರಮಾಣ ವಚನ
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಕಾರ್ಯಾಲಯದಿಂದ ಡಿಸಿಎಂ ಜಿ. ಪರಮೇಶ್ವರ್ ಅವರಿಗೆ ಇಂದು ಆಹ್ವಾನ ತಲುಪಿದೆ.
ಪರಮೇಶ್ವರ್
ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿರುವ ಬೆನ್ನಲ್ಲೇ ಡಿಸಿಎಂ ಡಾ. ಜಿ. ಪರಮೇಶ್ವರ್ಗೂ ದೆಹಲಿಯ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ.
ನಾಳೆ ದೆಹಲಿಯಲ್ಲಿ ನಡೆಯಲಿರುವ ಮೋದಿ ಪದಗ್ರಹಣ ಸಮಾರಂಭದಲ್ಲಿ ಪರಮೇಶ್ವರ್ ಪಾಲ್ಗೊಳ್ಳುವ ಸಾಧ್ಯತೆ ಇದೆ.