ಕರ್ನಾಟಕ

karnataka

ETV Bharat / state

ಉಪಚುನಾವಣೆ ಟಿಕೆಟ್​ ಸಂಬಂಧ ಹೈಕಮಾಂಡ್ ನಿರ್ಧಾರ ಅಂತಿಮ: ಡಿಕೆಶಿ - ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ

ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಕುರಿತು ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್
DK Shivakumar

By

Published : Jan 9, 2021, 6:56 PM IST

Updated : Jan 9, 2021, 7:17 PM IST

ಬೆಂಗಳೂರು:ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಈ ಭಾಗದ ಮುಖಂಡರ ಜೊತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆಗೆ ಸಂಬಂಧಿಸಿದಂತೆ ಈ ಭಾಗದ ಮುಖಂಡರ ಸಭೆ ಕರೆದು ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿದ್ದು, ನಾನು ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಂತಿಮ ಪಟ್ಟಿಯನ್ನು ನಾನು ಮಾಡುವುದಿಲ್ಲ. ನಾನು ಹೆಸರುಗಳನ್ನು ಶಿಫಾರಸು ಮಾತ್ರ ಮಾಡುತ್ತೇನೆ ಎಂದು ಹೇಳಿದರು.

ವಂಚಕ ಯುವರಾಜ್ ಜೊತೆ ಸಚಿವರ ಸಂಪರ್ಕದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಉಪಚುನಾವಣೆಗೆ ಒಂದೊಂದು ಕ್ಷೇತ್ರಕ್ಕೆ ನಾಲೈದು ಹೆಸರು ಚರ್ಚೆಯಾಗಿದೆ: ಖಂಡ್ರೆ

ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ

ಉಪಚುನಾವಣೆಗೆ ಸ್ಪರ್ಧಿಸಲು ಹಲವು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವತ್ತು ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ಸಭೆ ನಡೆಯಿತು. ನಮ್ಮ ಅಧ್ಯಕ್ಷರು, ಹಿರಿಯರು ಭಾಗವಹಿಸಿದ್ದರು. ಬೆಳಗಾವಿ ಲೋಕಸಭಾ ಮತ್ತು ಬಸವಕಲ್ಯಾಣ ವಿಧಾನಸಭೆ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯಿತು. ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಯಾರನ್ನು ಅಭ್ಯರ್ಥಿ ಮಾಡಬೇಕೆಂಬ ಚರ್ಚೆ ನಡೆದಿದೆ. ಒಂದೊಂದು ಕ್ಷೇತ್ರಕ್ಕೆ ನಾಲ್ಕೈದು ಹೆಸರು ಚರ್ಚೆಯಾಗಿದೆ. ಅದನ್ನು ಹೈಕಮಾಂಡ್​​​ಗೆ ಕಳುಹಿಸುತ್ತೇವೆ. ಅವರು ಅಂತಿಮ ಮಾಡಿ ಕಳುಹಿಸುತ್ತಾರೆ ಎಂದರು.

ಬೀದರ್ ನಾಯಕರ ಅಸಮಾಧಾನ ವಿಚಾರದ ಬಗ್ಗೆ ಮಾತನಾಡಿ, ವಿಜಯ್ ಸಿಂಗ್ ಅವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇವರ ಜೊತೆ ಇನ್ನಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಅವರ ಹೆಸರು ಕೂಡ ಹೈಕಮಾಂಡ್​​​ಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ಹೈಕಮಾಂಡ್​​​ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ವಿವರಿಸಿದರು.

Last Updated : Jan 9, 2021, 7:17 PM IST

ABOUT THE AUTHOR

...view details