ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ 4545 ರಸ್ತೆ ಗುಂಡಿ.. ಜನರೇ ಕೊಟ್ಟರು ಲೆಕ್ಕ - ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿ ತಪ್ಪಿದ್ದಲ್ಲ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿರುತ್ತದೆ. ಇವೆಲ್ಲದರ ನಡುವೆ ಮಳೆರಾಯ ನಿರಂತರವಾಗಿ ಅಬ್ಬರಿಸಿರುವ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ.

ಬಿ ಎನ್ ಪ್ರಹ್ಲಾದ್​
ಬಿ ಎನ್ ಪ್ರಹ್ಲಾದ್​

By

Published : Aug 11, 2022, 6:31 AM IST

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಯನ್ನು ಗುಂಡಿಮುಕ್ತ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಆದರೂ ಸಹ ಉದ್ಯಾನ ನಗರಿ ರಸ್ತೆಗಳು ಗುಂಡಿ ಮುಕ್ತವಾಗಿಲ್ಲ.

ರಾಜಧಾನಿಯಲ್ಲಿ ರಸ್ತೆ ಗುಂಡಿಗಳ ಹಾವಳಿ ತಪ್ಪಿದ್ದಲ್ಲ. ಅವೈಜ್ಞಾನಿಕ ಹಂಪ್, ಕೇಬಲ್ ಅಳವಡಿಕೆಗೆ ರಸ್ತೆ ಅಗೆತ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯದ ನೆಪದಲ್ಲಿ ರಸ್ತೆ ಅಗೆದು ಟಾರ್ ಹಾಕದೇ ಬಿಡಲಾಗಿರುತ್ತದೆ. ಇವೆಲ್ಲದರ ನಡುವೆ ಮಳೆರಾಯ ನಿರಂತರವಾಗಿ ಅಬ್ಬರಿಸಿರುವ ಪರಿಣಾಮ ರಸ್ತೆಗಳಲ್ಲಿ ಗುಂಡಿಗಳಾಗಿವೆ. ಮಳೆ ಬಂದರೆ ಗುಂಡಿಗಳು ಕೆರೆಗಳಾಗಿ ಪರಿವರ್ತನೆಯಾಗುತ್ತವೆ. ಇದರಿಂದಾಗಿ ವಾಹನ ಸವಾರರು ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಫಿಕ್ಸ್ ಮೈ ಸ್ಟ್ರೀಟ್ ಎಂಬ ಅಪ್ಲಿಕೇಶನ್ ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆಯ ಜಿಯೋ ಮ್ಯಾಪ್ ಮೂಲಕ ನಡೆಸಿರುವ ಸಮೀಕ್ಷೆಯಲ್ಲಿ ಬೆಂಗಳೂರು ನಗರದ ರಸ್ತೆಗುಂಡಿಗಳ ಅಂಕಿ - ಅಂಶಗಳು ಸಿಕ್ಕಿವೆ. ಜನರೇ ಕೊಟ್ಟಿರುವ ರಸ್ತೆ ಗುಂಡಿಗಳ ಲೆಕ್ಕ ನೋಡಿ ಬಿಬಿಎಂಪಿ ಅಧಿಕಾರಿಗಳೇ ತಲೆ ಕೆಡಸಿಕೊಂಡಿದ್ದಾರೆ .

ಸಮೀಕ್ಷೆಯಲ್ಲಿ 4545 ರಸ್ತೆ ಗುಂಡಿಗಳು ಪತ್ತೆ: ಸಮೀಕ್ಷೆಯಲ್ಲಿ ನಗರದಲ್ಲಿ ಇನ್ನೂ 4545 ರಸ್ತೆ ಗುಂಡಿಗಳು ಇವೆ ಎಂಬ ಮಾಹಿತಿ ಲಭ್ಯವಾಗಿದೆ. ರಸ್ತೆ ಗುಂಡಿಯನ್ನು ಮುಚ್ಚುವ ಕೆಲಸವನ್ನು ಮಾಡಲಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಅಭಿಯಂತರ ಬಿ ಎನ್ ಪ್ರಹ್ಲಾದ್​ ಅವರು ಮಾತನಾಡಿದರು

ಪೂರ್ವ ವಲಯದಲ್ಲಿ ಅತಿ ಹೆಚ್ಚು ಗುಂಡಿ: ಬೊಮ್ಮನಹಳ್ಳಿ ವಿಭಾಗದಲ್ಲಿ 1076, ದಾಸರಹಳ್ಳಿ 867, ಪೂರ್ವ 566, ಮಹದೇವಪುರ 329, ಆರ್. ಆರ್ ನಗರ 1068, ದಕ್ಷಿಣ 414, ಪಶ್ಚಿಮದಲ್ಲಿ 225 ರಸ್ತೆ ಗುಂಡಿಗಳು ಇವೆ. ಪೂರ್ವ ವಲಯದಲ್ಲಿ ಅತಿ ಹೆಚ್ಚು ಎಂದರೆ 2066 ಗುಂಡಿಗಳು ಪತ್ತೆಯಾಗಿವೆ. ದಾಸರಹಳ್ಳಿ, ಯಲಹಂಕ, ಮಹದೇವಪುರದಲ್ಲಿ ಕಡಿಮೆ ಗುಂಡಿಗಳಿವೆ. ಬೆಂಗಳೂರಿನ 5 ವಿಧಾನಸಭಾ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಯನ್ನು ಮುಚ್ಚಲು ಗುತ್ತಿಗೆದಾರರಿಗೆ ಕಾರ್ಯಾದೇಶವನ್ನು ನೀಡಲಾಗಿದೆ. ಉಳಿದ 22 ಕಡೆ ಪಾಲಿಕೆಯಿಂದಲೇ ರಸ್ತೆ ಗುಂಡಿಗಳನ್ನು ಮುಚ್ಚಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಸ್ತೆ ಗುಂಡಿಗಳಿಗೆ ಮುಕ್ತಿ ಯಾವಾಗ?:ಈಗಾಗಲೇ ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ನಗರದಲ್ಲಿ ಹಲವಾರು ಅಪಘಾತಗಳು ನಡೆಯುತ್ತಿವೆ. ಇನ್ನು ಮಳೆಗಾಲ ಆರಂಭವಾಗುತ್ತಿದೆ. ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಆಹ್ವಾನ ನೀಡುತ್ತವೆ. ಬಿಬಿಎಂಪಿ ರಸ್ತೆ ಗುಂಡಿಗಳಿಗೆ ಯಾವಾಗ ಮುಕ್ತಿ ಸಿಗಲಿದೆ ಎಂದು ಕಾದು ನೋಡಬೇಕಿದೆ.

ಓದಿ:ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ನಾನು ಸಿಎಂ ರೇಸ್​ನಲ್ಲಿಲ್ಲ: ಸಚಿವ ಎಸ್ ಟಿ ಸೋಮಶೇಖರ್

ABOUT THE AUTHOR

...view details