ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಭೇಟಿ ನೀಡಿದರು.
ಮತಗಳ ಎಣಿಕೆ ಆರಂಭದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರದ ಒಳಗೆ ತೆರಳಿದ್ದಾರೆ. ಕ್ಷೇತ್ರದಲ್ಲಿ ಸೋಲು, ಗೆಲುವು ಸಾಕಷ್ಟು ಕುತೂಹಲ ಕೆರಳಿಸಿದ್ದು, ಈ ಇಬ್ಬರ ಆಗಮನ ಇನ್ನಷ್ಟು ಕೌತುಕ ಮೂಡಿಸಿದೆ.