ಕರ್ನಾಟಕ

karnataka

ETV Bharat / state

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಸಿಬಿಐನಿಂದ ಮತ್ತೋರ್ವ ಆರೋಪಿಯ ಬಂಧನ - CBI arrested to PD Kumar

ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂ ಸ್ವಾಧೀನ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪಿ.ಡಿ.ಕುಮಾರ್ ಎಂಬಾತನನ್ನು ಬಂಧಿಸಿದೆ.

PD Kumar arrested by CBI
ಪಿ.ಡಿ.ಕುಮಾರ್

By

Published : Nov 23, 2020, 8:08 PM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಈ ಸಂಬಂಧ‌ ಮತ್ತೋರ್ವ ಆರೋಪಿಯನ್ನು ಬಂಧಿಸಿ ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂ ಸ್ವಾಧೀನ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪಿ.ಡಿ.ಕುಮಾರ್ ಬಂಧಿತ ಆರೋಪಿ. ಈತ ಮನ್ಸೂರ್ ಖಾನ್​​ನಿಂದ ಸುಮಾರು 5 ಕೋಟಿ‌ ಹಣ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ರಾಜ್ಯ ವಿಶೇಷ ತಂಡ (ಎಸ್ಐಟಿ) ತಂಡವು ಕುಮಾರ್​ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ 5 ಕೋಟಿ ರೂಪಾಯಿ ಪಡೆದಿರುವುದಾಗಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದ ಎನ್ನಲಾಗಿತ್ತು.

ಮತ್ತೊಂದೆಡೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್​ನನ್ನು ಸಿಬಿಐ ಐದು‌ ದಿನಗಳ ಕಾಲ ವಶಕ್ಕೆ‌ ಪಡೆದುಕೊಂಡಿದೆ. ಬಂಧಿತ ಆರೋಪಿ ಕುಮಾರ್​​ನನ್ನು ಮನ್ಸೂರ್ ಖಾನ್ ಎದುರುಗಡೆ ಕೂರಿಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ABOUT THE AUTHOR

...view details