ಕರ್ನಾಟಕ

karnataka

ETV Bharat / state

ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ; ಇದು ಅಪಾಯಕಾರಿ ಎಂದ ಹೆಚ್​ಡಿಕೆ - ಕುಮಾರಸ್ವಾಮಿ ಪ್ರತಿಕ್ರಿಯೆ

ಹೆಚ್ಚಿನ ಸುದ್ದಿಗೆ ಗ್ರಾಸವಾಗಿರುವ ಪೆಗಾಸಸ್​ ಫೋನ್ ಕದ್ದಾಲಿಗೆ ಬಗ್ಗೆ ಇದೇ ಮೊದಲ ಸಲ ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ ಮಾತನಾಡಿದ್ದಾರೆ.

HD kumaraswamy
HD kumaraswamy

By

Published : Jul 20, 2021, 6:07 PM IST

Updated : Jul 20, 2021, 8:13 PM IST

ಬೆಂಗಳೂರು:ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ.‌ ಇದು ಎಲ್ಲ ಸರ್ಕಾರಗಳ ಅವಧಿಯಲ್ಲೂ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ‌ ಮಾತನಾಡಿದ ಅವರು, ನಾನು ಈ ಪ್ರಕರಣದ ಬಗ್ಗೆ ಚಿಂತಿಸಿಲ್ಲ. ಈ ಹಿಂದೆಯೂ ಬಹಳಷ್ಟು ಸರ್ಕಾರಗಳು, ಆದಾಯ ತೆರಿಗೆ ಇಲಾಖೆ ಮತ್ತು ಇತರ ತನಿಖಾ ಸಂಸ್ಥೆಗಳು ಫೋನ್ ಕದ್ದಾಲಿಕೆ ಮಾಡಿವೆ. ಇದು ಕಳೆದ 10-15 ವರ್ಷಗಳಿಂದ ನಡೆಯತ್ತಿದೆ. ಇದು ಹೊಸ ಪ್ರಕರಣವೇನೂ ಅಲ್ಲ. ಮೋದಿ ಬಂದ ಬಳಿಕ ಮಾತ್ರ ಇದು ಆಗಿದ್ದಲ್ಲ. ಇದು ಸಹಜ ವಿಷಯ. ನಾನು ಮುಖ್ಯಮಂತ್ರಿ ಆಗಿದ್ದಾಗ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂದು ಹೇಳಲಾಗಿದೆ‌. ನಾನು ಅಧಿಕಾರದಲ್ಲಿದ್ದಾಗ ಯಾವುದೇ ತಪ್ಪು ಮಾಡಿಲ್ಲ. ದೇಶದ ಭದ್ರತೆಗೆ ಯಾವುದೇ ಅಪಾಯ ತಂದೊಡ್ಡುವ ಕೆಲಸ‌ ಮಾಡಿಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪೆಗಾಸಸ್​ ಪ್ರಕರಣ: ಹೆಚ್​ಡಿಕೆ ಪ್ರತಿಕ್ರಿಯೆ ಹೀಗಿದೆ

ಇದನ್ನೂ ಓದಿ: 2019ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಪತನದಲ್ಲಿ 'ಪೆಗಾಸಸ್‌ ಕಣ್ಗಾವಲು' ಮಹತ್ವದ ಪಾತ್ರ!?

ಕೋವಿಡ್​ನ ಈ ಸಂದರ್ಭದಲ್ಲಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಎಲ್ಲ ಪಕ್ಷಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರ ಎಲ್ಲ ಕಚೇರಿ, ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತವೆ. ಬಿಜೆಪಿ ಸರ್ಕಾರ ಮಾತ್ರ ಅಲ್ಲ, ಕಾಂಗ್ರೆಸ್ ಸರ್ಕಾರವೂ ಫೋನ್ ಕದ್ದಾಲಿಕೆ ಮಾಡಿದೆ. ಅವರ ಸರ್ಕಾರ ಉಳಿಸಲು ಈ ರೀತಿ‌ ಮಾಡುತ್ತಾರೆ ಎಂದು ತಿಳಿಸಿದರು.
ಅದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಗತ್ಯ ಇಲ್ಲ. ನಾನು ಈ ವ್ಯವಸ್ಥೆಯಲ್ಲಿ ಮುಂದುವರಿಯಲು ತಯಾರಿಲ್ಲ. ಸಿಎಂ ಸ್ಥಾನ ಬಿಟ್ಟ ಬಳಿಕ ನಾನು ಅತ್ಯಂತ ಸಂತೋಷಭರಿತ ವ್ಯಕ್ತಿಯಾಗಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.

ಕುಮಾರಸ್ವಾಮಿ ಟ್ವಿಟ್​

ಪೆಗಾಸಸ್​​ ಗೂಢಾಚರ್ಯೆಯಲ್ಲಿ‌ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇದು ಮಾನವ ಹಕ್ಕು ಉಲ್ಲಂಘನೆಯಂತಹ ಪ್ರಕರಣವಾದರೂ ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯಗಳಲ್ಲಿ ಸರ್ಕಾರ ಕೆಡವಿ, ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಾಲಿಕೆ ಆರೋಪ ಮಾಡಿತು. ಸಿಬಿಐ ತನಿಖೆ ನಡೆಸಿತು. ಅದಾಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಅಪಾಯಕಾರಿ ಎಂದಿದ್ದಾರೆ. ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಅಗತ್ಯಬಿದ್ದಾಗ ಜನರ ವೈಯಕ್ತಿಕ ಬದುಕಿನಲ್ಲಿ ಇಣಕುವುದಿಲ್ಲ ಎಂಬುದಕ್ಕೆ ಖಚಿತತೆ ಇದೆಯೇ ? ಅಂತ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಈಗ ಮಾನವ ಹಕ್ಕುಗಳತ್ತ ಕೇಂದ್ರೀಕೃತವಾಗಿದೆ. ಬಿಜೆಪಿಯ ಇಂಥ ಕೃತ್ಯಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಹೇಳಿದ್ದಾರೆ.

Last Updated : Jul 20, 2021, 8:13 PM IST

ABOUT THE AUTHOR

...view details