ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಗಳನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅನುಮತಿಸುವ ಅಧಿಕಾರಿಗಳಿಗೆ ದಂಡ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ - ಸಾರ್ವಜನಿಕ ಹಿತಾಸಕ್ತಿ ಅರ್ಜಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಹೈಕೋರ್ಟ್
ಈ ಕುರಿತು ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.ವಿಚಾರಣೆ ವೇಳೆ ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮದ ಅಧಿಸೂಚನೆ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ವರದಿ ನೀಡಿದರು.
ಈ ವೇಳೆ ನ್ಯಾಯಾಲಯ ಸರ್ಕಾರ ಮಾಡಿರುವ ಕರಡು ನಿಯಮದ ಅಧಿಸೂಚನೆ ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.