ಬೆಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
ಕೆಎಸ್ಆರ್ಟಿಸಿಯಲ್ಲಿ ಟಿಕೆಟ್ ಪಡೆಯದೆ ಪ್ರಯಾಣ: 5935 ಪ್ರಯಾಣಿಕರಿಗೆ ದಂಡ! - Bengaluru Latest news
ಟಿಕೆಟ್ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ ವಿಧಿಸಿ ನಿಗಮದ ಅಧಿಕಾರಿಗಳು ಭಾರೀ ಮೊತ್ತದ ಹಣವನ್ನು ವಸೂಲಿ ಮಾಡಿದ್ದು, ಈ ಮೂಲಕ ನಿಗಮದ ಆದಾಯದಲ್ಲಿ ಆಗುತ್ತಿದ್ದ ಸೋರಿಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ಜುಲೈನಲ್ಲಿ ತಪಾಸಣೆ ನಡೆಸಿ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 46,458 ವಾಹನಗಳನ್ನು ತನಿಖೆಗೊಳಪಡಿಸಿತ್ತು. ಆ ಸಮಯದಲ್ಲಿ 4,844 ಪ್ರಕರಣಗಳನ್ನು ಪತ್ತೆ ಹಚ್ಚಿ, ಒಟ್ಟು 5,935 ಟಿಕೆಟ್ ರಹಿತ ಪ್ರಯಾಣಿಕರಿಂದ 7,35,523 ರೂಪಾಯಿಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.
ಜೊತೆಗೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ಇತರ 89,043 ರೂ.ಗಳನ್ನೂ ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹಾಗೂ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದ್ದಾರೆ. ಆದ್ದರಿಂದ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಮತ್ತು ಪಾಸ್ ಪಡೆದು ಪ್ರಯಾಣ ಮಾಡುವಂತೆ ಸಂಸ್ಥೆಯು ಪ್ರಕಟಣೆಯಲ್ಲಿ ಕೋರಿದೆ.