ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಕೂಡಲೇ ಸರ್ಕಾರ ಪಿಂಚಣಿ ಬಿಡುಗಡೆ ಮಾಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ಕೊಡದಿರುವುದು ಅಕ್ಷಮ್ಯ: ಈಶ್ವರ್ ಖಂಡ್ರೆ ಕಿಡಿ
ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಕೊಡದಿರುವುದು ಅಕ್ಷಮ್ಯ ಎಂದು ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿ ಕಾರಿದ್ದಾರೆ.
ಸರ್ಕಾರದ ವಿರುದ್ಧ ಖಂಡ್ರೆ ಕಿಡಿ ಈಶ್ವರ್ ಖಂಡ್ರೆ
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೇಶವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಲು ಸೆರೆವಾಸ ಅನುಭವಿಸಿದ ವೀರ ಸ್ವಾತಂತ್ರ್ಯ ಹೋರಾಟಗಾರರಿಗೆ ನಾಲ್ಕು ತಿಂಗಳಿಂದ ಪಿಂಚಣಿ ನೀಡದ ಸರ್ಕಾರದ ಕ್ರಮ ನಿಜಕ್ಕೂ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.
ಕೋವಿಡ್ ಸಂಕಷ್ಟದಿಂದ ತೊಂದರೆ ಅನುಭವಿಸುತ್ತಿರುವ ಸ್ವಾತಂತ್ರ್ಯ ಹೋರಾಟಗಾರರಿಗೆ ಕೂಡಲೇ ಸರ್ಕಾರ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.