ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ಒಂದು ವಾರ ಲಾಕ್ಡೌನ್ಗೆ ಸರ್ಕಾರ ಮುಂದಾಗಿದೆ. ಇತ್ತ ಜನರು ಗಂಟುಮೂಟೆ ಕಟ್ಟಿ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
ಬೆಂಗಳೂರು ಲಾಕ್ಡೌನ್: ತಂತಮ್ಮ ಊರುಗಳಿಗೆ ಹೊರಟ ಜನ!
ನಾಳೆ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
ನಾಳೆ ರಾತ್ರಿ 8 ಗಂಟೆಯಿಂದ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಜನರು ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಜನರು ದೌಡಾಯಿಸುತ್ತಿದ್ದು, ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಬಸ್ಗಳು ಸಂಚಾರ ನಡೆಸುತ್ತಿದ್ದು, ಮೆಜೆಸ್ಟಿಕ್ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಜನರು ಬಸ್ಗಳಿಗಾಗಿ ಕಾದು ಕುಳಿತಿರುವ ದೃಶ್ಯ ಕಂಡು ಬಂತು.