ಬೆಂಗಳೂರು:ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನು ನಾನು ಹೇಳಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಹೌದು ಎಂದು ಶಾಸಕ ಜಮೀರ್ ಅಹಮದ್ ತಿಳಿಸಿದ್ದಾರೆ.
ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಯಶವಂತಪುರ ವಾರ್ಡ್ನಲ್ಲಿ ರೋಡ್ ಶೋಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತದೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗೋದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದು ತಿಳಿಸಿದರು.