ಕರ್ನಾಟಕ

karnataka

ETV Bharat / state

ಟರ್ಫ್ ಕ್ಲಬ್ ಆನ್​ಲೈನ್ ಬೆಟ್ಟಿಂಗ್​ಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸರ್ಕಾರ ಜುಲೈ 2 ರಂದು ಆನ್​ಲೈನ್ ಮೂಲಕ ಬೆಟ್ಟಿಂಗ್ ನಡೆಸಲು ಬೆಂಗಳೂರು ಟರ್ಫ್ ಕ್ಲಬ್ ಗೆ ಅನುಮತಿ ನೀಡಿದೆ. ಇದು ಸಮಾಜಕ್ಕೆ ಮಾರಕವಾಗಿದೆ ಎಂದು ಅರ್ಜಿದಾರರ ಪರ ವಕೀಲ ಪ್ರವೀಣ್ ಗೌಡ ತಿಳಿಸಿದ್ದಾರೆ.

High Court
ಹೈಕೋರ್ಟ್

By

Published : Nov 3, 2020, 11:34 PM IST

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್​ಗೆ ಆನ್​ಲೈನ್ ಬೆಟ್ಟಿಂಗ್ ನಡೆಸಲು ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಾಗೆಯೇ, ಈ ರೀತಿ ಅನುಮತಿ ನೀಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂಬ ಕುರಿತು ನವೆಂಬರ್ 20 ರೊಳಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಈ ಕುರಿತು ಶಾಂತಿ ನಗರ ನಿವಾಸಿ ಗೋಪಾಲ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಗೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಪ್ರವೀಣ್ ಗೌಡ ವಾದಿಸಿ, ಸರ್ಕಾರ ಜುಲೈ 2 ರಂದು

ಆನ್​ಲೈನ್ ಮೂಲಕ ಬೆಟ್ಟಿಂಗ್ ನಡೆಸಲು ಬೆಂಗಳೂರು ಟರ್ಫ್ ಕ್ಲಬ್ ಗೆ ಅನುಮತಿ ನೀಡಿದೆ. ಇದು ಸಮಾಜಕ್ಕೆ ಮಾರಕವಾಗಿದೆ. ಆ ಮೂಲಕ ಸರ್ಕಾರವೇ ಸಾರ್ವಜನಿಕರ ಬೆಟ್ಟಿಂಗ್ ಗೆ ಪ್ರೋತ್ಸಾಹ ನೀಡಿದೆ. ಇದರಿಂದಾಗಿ ಯುವಕರು ಹಾಗೂ ಸಮಾಜದ ಹಲವು ವರ್ಗದ ಜನ ಬೀದಿಗೆ ಬೀಳಲಿದ್ದಾರೆ. ಒಟ್ಟಾರೆ ಸಮಾಜದ ಮೇಲೆ ಭಾರೀ ಪರಿಣಾಮವಾಗಲಿದೆ ಎಂದು ವಿವರಿಸಿದರು.

ಅಲ್ಲದೇ, ಸರ್ಕಾರ ಆನ್​ಲೈನ್ ಬೆಟ್ಟಿಂಗ್​ಗೆ ಅನುಮತಿ ನೀಡಿರುವುದರಿಂದ ಹಲವರು ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಳ್ಳಲಿದ್ದಾರೆ. ಕಾಲೇಜಿಗೆ ಹೋಗುವ ಯುವಕರು ಬೆಟ್ಟಿಂಗ್ ಚಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಸರ್ಕಾರ ನಿಮಯಗಳನ್ನು ಪಾಲಿಸದೆ ಅನುಮತಿ ನೀಡಿರುವುದು ಸರಿಯಲ್ಲ, ಹಾಗಾಗಿ ಕೂಡಲೇ ಅನುಮತಿಯನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಕೋರಿದರು. ವಾದ ಆಲಿಸಿದ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

ABOUT THE AUTHOR

...view details