ಬೆಂಗಳೂರು :ಹಳೆ ದ್ವೇಷದ ಹಿನ್ನೆಲೆ ಹಾಡಹಾಗಲೇ ರೌಡಿಶೀಟರ್ನನ್ನು ಚಾಕುವಿನಿಂದ ಚುಚ್ಚಿ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹರೀಶ್ ಎಂಬಾತ ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ.
ಹರೀಶ್ ಬಸವೇಶ್ವರನಗರ ನಿವಾಸಿಯಾಗಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಸಿಆರ್ಪಿಸಿ 110ರಡಿ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲು ಇಂದು ಬಾಣಸವಾಡಿ ಪೊಲೀಸರು ಠಾಣೆಗೆ ಕರೆಸಿಕೊಂಡು ವಾರ್ನ್ ಮಾಡಿ ಕಳುಹಿಸಿದ್ದರು. ಠಾಣೆಯಿಂದ ಬೈಕ್ನಲ್ಲಿ ಹೋಗುತ್ತಿದ್ದ ಹರೀಶ್ನನ್ನು ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು, ಸಿಎಂಆರ್ ಕಾಲೇಜು ಬಳಿ ಏಕಾಏಕಿ ಆತನ ಮೇಲೆ ಅಟ್ಯಾಕ್ ಮಾಡಿದ್ದಾರೆ.
ಕಾರಿನಲ್ಲಿ ಬಂದ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು, ಚಾಕುವಿಂದ ಚುಚ್ಚಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಮಾಹಿತಿ ಆಧರಿಸಿ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ತೆರಳಿ, ಪರಿಶೀಲಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲೆಯಾದ ರೌಡಿಶೀಟರ್ ಹರೀಶ್ ರೌಡಿಶೀಟರ್ ಹರೀಶ್ ವಿರುದ್ಧ 2018ರಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದ್ದವು. ಇತ್ತೀಚೆಗೆ ಬಂಗಾರಿ ಎಂಬಾತನೊಂದಿಗೆ ಹರೀಶ್ ಗಲಾಟೆ ಮಾಡಿಕೊಂಡಿದ್ದನು. ಅದೇ ದ್ವೇಷದಿಂದ ಹರೀಶ್ ಕೊಲೆ ಮಾಡಿರುವ ಸಾಧ್ಯತೆ ಇದೆ. ಇದೇ ಶಂಕೆಯ ಹಿನ್ನೆಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.
ಓದಿ: Pornography Case.. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜಾಮೀನು ಅರ್ಜಿ ವಜಾ