ಬೆಂಗಳೂರು:ಹೆಡ್‌ಫೋನ್ ವಿಚಾರಕ್ಕೆ ನಡೆದ ಗಲಾಟೆ ಒಬ್ಬ ಯುವಕನ ಕೊಲೆಯಲ್ಲಿ ಮುಗಿದ ಘಟನೆ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಕಾರ್ತಿಕ್(27) ಕೊಲೆಯಾದ ವ್ಯಕ್ತಿ. ಈ ಸಂಬಂಧ ರಜನೀಶ್ ಮತ್ತು ರವಿ ಎಂಬುವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರಿಗಾಗಿ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ಕಾರ್ತಿಕ್, ರಜನೀಶ್ ಮತ್ತು ರವಿ ಎಂಬುವರು ದೊಡ್ಡನಾಗಮಂಗಲದ ಬಾಲಾಜಿ ಲೇಔಟ್‌ನಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ವಾಸವಾಗಿದ್ದರು. ಡಿ. 31ರಂದು ಆರೋಪಿ ರಜನೀಶ್ ಹುಟ್ಟುಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ನಿರ್ಮಾಣ ಹಂತದ ಕಟ್ಟಡದಲ್ಲೇ ಕಾರ್ತಿಕ್, ರವಿ ಹಾಗೂ ಇತರರು ಪಾರ್ಟಿ ಮಾಡಿದ್ದಾರೆ. ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ.