ಕರ್ನಾಟಕ

karnataka

ETV Bharat / state

ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಟ್ವೀಟ್ ಮಾಡಿದ್ದ ವ್ಯಕ್ತಿ ಬಂಧನ - ನಾನು ಬೆಂಗಳೂರು ಏರ್​ಪೋರ್ಟ್​ಗೆ ಬಾಂಬ್ ಹಾಕುತ್ತೇನೆ

ಡಿ. 10ರಂದು ಆರೋಪಿ ತನ್ನ ಟ್ವಿಟರ್ ಖಾತೆಯಲ್ಲಿ ನಾನು ಬೆಂಗಳೂರು ಏರ್​ಪೋರ್ಟ್​ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್​ನಲ್ಲಿ ಟ್ವೀಟ್ ಮಾಡಿದ್ದ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Bengaluru Airport
ಬೆಂಗಳೂರು ವಿಮಾನ ನಿಲ್ದಾಣ

By

Published : Dec 22, 2022, 11:04 AM IST

ದೇವನಹಳ್ಳಿ: ಏರ್​ಪೋರ್ಟ್​ನಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆ ಟ್ವೀಟ್ ಮಾಡಿದ ವ್ಯಕ್ತಿಯನ್ನ ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ (20) ಬಂಧಿತ ಆರೋಪಿ.

ಈತ ಡಿ. 10ರಂದು ಆರೋಪಿ ತನ್ನ ಟ್ವಿಟರ್ ಖಾತೆಯಲ್ಲಿ ನಾನು ಬೆಂಗಳೂರು ಏರ್​ಪೋರ್ಟ್​ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್​ನಲ್ಲಿ ಟ್ವೀಟ್ ಮಾಡಿದ್ದ. ಈ ಟ್ವೀಟ್​ ಅನ್ನು ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್​ ಖಾತೆಗೂ ಟ್ಯಾಗ್​ ಮಾಡಿದ್ದನು.

ಬಾಂಬ್ ಬೆದರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಪೋರ್ಟ್ ಮ್ಯಾನೇಜರ್ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ಕುರಿತು ಸೈಬರ್ ಕ್ರೈಮ್ ಪೊಲೀಸರ ಸಹಯೋಗದೊಂದಿಗೆ ಸಿಟಿ ಪೊಲೀಸರು ತನಿಖೆ ಆರಂಭಿಸಿದ್ದರು. ಬಾಂಬ್ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಟ್ವೀಟ್​

ABOUT THE AUTHOR

...view details