ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ನಿವೃತ್ತ ಸೈನಿಕರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಕೇಂದ್ರ ಚುನಾವಣಾ ಆಯೋಗ, ಬಿಜೆಪಿ, ಕಾಂಗ್ರೆಸ್ ಮತ್ತಿತರ ಪ್ರಮುಖ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಅಧಿಕಾರ ಹಿಡಿಯಲೇಬೇಕು ಎಂಬ ಉದ್ದೇಶದಿಂದ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷ ಒಡ್ಡುತ್ತಿವೆ. ಹಾಗಾಗಿ ಅಂತಹ ರಾಜಕೀಯ ಅಭ್ಯರ್ಥಿಗಳು ಮತ್ತು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೆ, ಜನರ ತೆರಿಗೆ ಹಣದಲ್ಲಿ ಅಧಿಕಾರ ಲಾಲಸೆಗೆ ಮತದಾರರಿಗೆ ಆಮಿಷವೊಡ್ಡಿ ಅವರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.