ಕರ್ನಾಟಕ

karnataka

ETV Bharat / state

ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಶ್ರೀಕಿ ಸಹೋದರನಿಂದ ಅರ್ಜಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ಬಿಟ್ ಕಾಯಿನ್ ಹಗರಣದ ರೂವಾರಿ ಎನ್ನಲಾದ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸಹೋದರ ಸುದರ್ಶನ್ ರಮೇಶ್ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

High Court
ಹೈಕೋರ್ಟ್

By

Published : Feb 1, 2022, 7:59 PM IST

ಬೆಂಗಳೂರು:ಉದ್ಯೋಗದ ನಿಮಿತ್ತ ನೆದರ್‌ಲ್ಯಾಂಡ್​ಗೆ ಪ್ರವಾಸ ಮಾಡಲು ಅನುಮತಿ ಕೋರಿ, ಬಿಟ್ ಕಾಯಿನ್ ಹಗರಣದ ರೂವಾರಿ ಎನ್ನಲಾದ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಸಹೋದರ ಸುದರ್ಶನ್ ರಮೇಶ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ಸುದರ್ಶನ್ ರಮೇಶ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ ನಡೆಸಿತು. ಬಳಿಕ ಕೋರ್ಟ್​ ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ಜಾರಿ ನಿರ್ದೇಶನಾಲಯ ಹಾಗೂ ಬ್ಯುರೊ ಆಫ್ ಇಮಿಗ್ರೇಷನ್‌ಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ:ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ಕೊಡುವ ಯಾವುದೇ ಭರವಸೆಗಳು ಬಜೆಟ್​​​​​ನಲ್ಲಿ ಇಲ್ಲ: ಡಿಕೆ ಸುರೇಶ್​

ಬಿಟ್ ಕಾಯಿನ್ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಶ್ರೀಕಿ ವಿರುದ್ಧ ಬಿಟ್ ಕಾಯಿನ್ ಹಗರಣದ ಆರೋಪ ಕೇಳಿ ಬಂದಾಗ ನಾನು ಭಾರತದಲ್ಲೇ ಇರಲಿಲ್ಲ ಎಂದು ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದೇನೆ. ಪ್ರಸ್ತುತ ನಮ್ಮ ತಂದೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾರೆ. ಅವರಿಗೆ ಚಿಕಿತ್ಸೆ ಕಲ್ಪಿಸುವ, ಅದಕ್ಕಾಗಿ ಹಣಕಾಸು ಹೊಂದಿಸುವ ಅವಶ್ಯಕತೆಯಿದೆ. ನನ್ನ ಕುಟುಂಬಕ್ಕೆ ನಾನೇ ಜೀವನಾಧಾರವಾಗಿದ್ದೇನೆ ಎಂದು ಸುದರ್ಶನ್ ರಮೇಶ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ, ಉದ್ಯೋಗಕ್ಕಾಗಿ ನೆದರ್‌ಲ್ಯಾಂಡ್‌ಗೆ ಹೋಗಲು ಜನವರಿ 13 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ತೆರಳಲು ಮುಂದಾದಾಗ, ಇಮಿಗ್ರೇಷನ್ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ನಮ್ಮ ಪಾಸ್‌ಪೋರ್ಟ್ ನಿರ್ಬಂಧಿಸಿದ್ದಾರೆ. ವಿದೇಶ ಪ್ರವಾಸ ನಿರ್ಬಂಧಿಸಿರುವ ಬಗ್ಗೆ ಮುಂಚಿತವಾಗಿ ನನಗೆ ಯಾವುದೇ ಮಾಹಿತಿ ನೀಡಿಲ್ಲ. ಆದ್ದರಿಂದ, ವಿದೇಶ ಪ್ರವಾಸಕ್ಕೆ ಅಡ್ಡಿಯಾಗಿರುವ ಜಾರಿ ನಿರ್ದೇಶನಾಲಯದ ಆದೇಶ ರದ್ದುಪಡಿಸಬೇಕು. ನೆದರ್‌ಲ್ಯಾಂಡ್‌ಗೆ ಪ್ರವಾಸ ಕೈಗೊಳ್ಳಲು ವಿಧಿಸಿರುವ ನಿರ್ಬಂಧ ತೆರವು ಮಾಡುವಂತೆ ಪ್ರತಿವಾದಿಗಳಿಗೆ ಆದೇಶಿಸಬೇಕು ಎಂದು ಸುದರ್ಶನ್ ರಮೇಶ್ ಅರ್ಜಿಯಲ್ಲಿ ಕೋರಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details