ಕರ್ನಾಟಕ

karnataka

ETV Bharat / state

ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ: ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ - ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್​ಗೆ​ ಅರ್ಜಿ ಸಲ್ಲಿಕೆಯಾಗಿದೆ.

petition-to-high-court-seeking-direction-to-government-to-investigate-beltangadi-student-murder-case
ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ : ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ

By ETV Bharat Karnataka Team

Published : Aug 28, 2023, 10:54 PM IST

Updated : Aug 29, 2023, 8:30 AM IST

ಬೆಂಗಳೂರು :ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಅಧೀನ ನ್ಯಾಯಾಲಯ ಮಾಡಿರುವ ಆದೇಶ ಉಲ್ಲಂಘಿಸಿರುವುದು ಹಾಗೂ ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣದ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್​ಗೆ​ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ವೀರೇಂದ್ರ ಹೆಗ್ಗಡೆ ಅವರ ಸಹೋದರನ ಅಳಿಯ ನಂದೀಶ್ ಕುಮಾರ್ ಜೈನ್ ಅವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ರಾಜ್ಯ ಸರ್ಕಾರ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಮತ್ತು ಧರ್ಮಸ್ಥಳಗಳ ಠಾಣಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.

ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯವು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಹಾಗೂ ಅದನ್ನು ವರದಿ ಮಾಡದಂತೆ ಮಾಧ್ಯಮಗಳು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅದಾಗ್ಯೂ, ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ನಿರಾಧಾರ ಆರೋಪ ಮಾಡಲಾಗುತ್ತಿದೆ. ಈ ಸಂಬಂಧ ದೂರು ಸಲ್ಲಿಸಿದ್ದರೂ, ಕ್ರಮಕ್ಕೆ ಮುಂದಾಗಿಲ್ಲ. ಪ್ರತಿಭಟನೆಯ ನೆಪದಲ್ಲಿ ಸ್ಥಾಪಿತ ಹಿತಾಸಕ್ತಿಗಳು ವೀರೇಂದ್ರ ಹೆಗ್ಗಡೆ ಅವರ ಕುಟುಂಬಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಅಪಪ್ರಚಾರ ನಡೆಸುವುದನ್ನು ಮುಂದುವರೆಸಲಾಗಿದೆ. ಹೀಗಾಗಿ, ಪ್ರತಿವಾದಿಗಳಿಗೆ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಅನ್ವಯ ಯಾವುದೇ ತೆರನಾದ ತನಿಖೆ ನಡೆಸಲು ರಾಜ್ಯ ಸರ್ಕಾರ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನ್ಯಾಯಾಂಗ ವ್ಯವಸ್ಥೆ, ಪೊಲೀಸರು ಮತ್ತು ತನಿಖಾ ಸಂಸ್ಥೆಗಳ ವಿರುದ್ಧ ಹಾಗೂ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಆಧಾರರಹಿತ ಆರೋಪ ಮಾಡದಂತೆ ನಿರ್ಬಂಧ ವಿಧಿಸಲು ಕೋರಿದ್ದಾರೆ.

ಇದನ್ನೂ ಓದಿ:ಮೈಸೂರಿನ ಪಾರಂಪರಿಕ ಕಟ್ಟಡಗಳ ನೆಲಸಮ ನಿರ್ಧಾರ ಪ್ರಶ್ನಿಸಿದ ಅರ್ಜಿ ವಜಾ

Last Updated : Aug 29, 2023, 8:30 AM IST

ABOUT THE AUTHOR

...view details