ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಸರ್ಕಾರ ಶಾಕ್ ನೀಡಿದೆ. ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಡುಗೆ ಅನಿಲದ ಬೆಲೆಯನ್ನು ಏರಿಕೆ ಮಾಡಿದೆ. ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಸುಮಾರು 50 ರೂ. ಏರಿಕೆಯಾಗಿದೆ. ಈ ಮೂಲಕ 14.2 ಕೆಜಿ ಸಿಲಿಂಡರ್ ಬೆಲೆ 902.50 ಪೈಸೆಯಿಂದ 949.50 ರೂ.ಗೆ ಹೆಚ್ಚಳವಾಗಿದೆ. ಇಂದಿನಿಂದಲೇ ಈ ದರ ಜಾರಿಯಾಗಲಿದೆ.
ಇತ್ತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿಯೂ ಏರಿಕೆ ಮಾಡಲಾಗಿದೆ. ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 101.42 ಪೈಸೆ ಮತ್ತು ಡೀಸೆಲ್ ಬೆಲೆ 85.80 ಪೈಸೆ ತಲುಪಿದೆ. ಈ ಮೂಲಕ ಡೀಸೆಲ್ ಮೇಲೆ 0.79 ಪೈಸೆ, ಪೆಟ್ರೋಲ್ ಮೇಲೆ 0.84 ಪೈಸೆ ಹೆಚ್ಚಳವಾದಂತಾಗಿದೆ.
ಯುದ್ಧದ ಎಫ್ಟೆಕ್ಟ್:ಯುಕ್ರೇನ್-ರಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲೂ ತೈಲ ಬೆಲೆ ಏರಿಕೆಯಾಗಿದೆ.