ಬೆಂಗಳೂರು:ಟೆಲಿಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಜೆಡಿಎಸ್ ಕಾರ್ಯದರ್ಶಿ ಶರಣಗೌಡ ಕಂದಕೂರ್ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ.
ಟೆಲಿಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐನಿಂದ ಶರಣಗೌಡ ವಿಚಾರಣೆ ಸಾಧ್ಯತೆ - ಸಿಬಿಐ ನಿಂದ ಶರಣಗೌಡ ತನಿಖೆ ಸಾಧ್ಯತೆ ಸುದ್ದಿ
ಟೆಲಿಫೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಬಿಎಸ್ವೈ ಆಡಿಯೋ ವಿಚಾರವಾಗಿ ಶರಣಗೌಡ ಅವರಿಂದ ಸಿಬಿಐ ಹೇಳಿಕೆ ಪಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಜೆಡಿಎಸ್ ರಾಜ್ಯ ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ದೇವದುರ್ಗದ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಬಿಎಸ್ವೈ ಜೊತೆ ಐಬಿಯಲ್ಲಿ ಮಾತುಕತೆ ನಡೆಸಿದ್ದ ಸಂದರ್ಭ, ಬಿಜೆಪಿಗೆ ಬರುವಂತೆ ಆಮಿಷವೊಡಿದ್ದಾರೆಂದು ಅರೋಪಿಸಿದ್ದರು. ಈ ಕುರಿತು ಫೋನ್ ಸಂಭಾಷಣೆಯ ರೆಕಾರ್ಡ್ನ್ನು ಅಂದಿನ ಸಿಎಂ ಕುಮಾರಸ್ವಾಮಿಯವರಿಗೆ ನೀಡಿದ್ದರು. ಅಂದು ಪತ್ರಿಕಾಗೋಷ್ಠಿ ನಡೆಸಿದ್ದ ಹೆಚ್ಡಿಕೆ ಧ್ವನಿಮುದ್ರಿಕೆ ಬಿಡುಗಡೆ ಮಾಡಿದ್ದರು. ಈ ಬಗ್ಗೆ ಗುರುಮಿಟ್ಕಲ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.
ಸದ್ಯ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಟೆಲಿಫೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಆಡಿಯೋ ವಿಚಾರವಾಗಿ ಶರಣಗೌಡ ಅವರಿಂದ ಸಿಬಿಐ ಮಾಹಿತಿ ಪಡೆಯಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.