ಬೆಂಗಳೂರು: ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ಒಟ್ಟು 54 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ವಿಚಾರಣೆ ಹಾಜರಾಗುವಂತೆ ತಿಳಿಸಿ ನೋಟಿಸ್ ಜಾರಿ ಮಾಡಿದ್ದಾರೆ.
ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ: 54 ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿ ಮಾಡಿದ ಸಿಬಿಐ - Senior officer Alok Kumar inquired by CBI
ರಾಜ್ಯದ 54 ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ 4,5 ಮತ್ತು 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇರೆಗೆ ಈ ಹಿಂದೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಆಡುಗೋಡಿ ಟೆಕ್ನಿಕಲ್ ಸೆಲ್ನ ಎಸಿಪಿ ಇನ್ಸ್ ಪೆಕ್ಟರ್ಗಳನ್ನ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.
ಇದೀಗ ಬೇರೆ ಬೇರೆ ಠಾಣೆಯ ಒಟ್ಟು 54 ಇನ್ಸ್‌ಪೆಕ್ಟರ್‌ಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ 4,5 ಮತ್ತು 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಈ ಎಲ್ಲಾ ಪೊಲೀಸರು ತನಿಖೆಯ ಉದ್ದೇಶದಿಂದ ಹಲವು ಪ್ರಕರಣಗಳಲ್ಲಿ ತಮ್ಮ ವ್ಯಾಪ್ತಿಗೊಳಪಟ್ಟ ಆರೋಪಿಗಳ ಫೋನ್ ಟ್ಯಾಪಿಂಗ್ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಇವರಿಗೆ ನೋಟಿಸ್ ನೀಡಿರುವ ಸಿಬಿಐ, ಫೋನ್ ಟ್ಯಾಪಿಂಗ್ ಯಾವ ಉದ್ದೇಶಕ್ಕಾಗಿ ಮಾಡಲಾಗಿದೆ? ನಿಮಗೆ ಸಿಕ್ಕ ಮಾಹಿತಿ ಏನು? ಎಂದು ಹೇಳುವಂತೆ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.