ಕರ್ನಾಟಕ

karnataka

ETV Bharat / state

ಸಿಬಿಐ ತನಿಖೆಗೆ ಫೋನ್ ಟ್ಯಾಪಿಂಗ್ ಪ್ರಕರಣ: ನಿರ್ಧಾರ ಬೆಂಬಲಿಸಿದ ಬಿಜೆಪಿ ನಾಯಕರು - somanna welcomes the phone tapping case goes to cbi

ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ನಾವು ಸ್ವಾಗತ ಮಾಡುತ್ತೇವೆ. ಈ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ ಎಂದು ಮಾಜಿ ಸಚಿವ ಸೋಮಣ್ಣ ಹೇಳಿದರು.

ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿದರು.

By

Published : Aug 18, 2019, 3:03 PM IST

ಬೆಂಗಳೂರು:ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದನ್ನು ನಾವು ಸ್ವಾಗತ ಮಾಡುತ್ತೇವೆ. ಈ ಪ್ರಕರಣ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ ಎಂದು ಮಾಜಿ ಸಚಿವ ಸೋಮಣ್ಣ ಅಭಿಪ್ರಾಯಪಟ್ಟರು.

ಮಾಜಿ ಸಚಿವ ವಿ.ಸೋಮಣ್ಣ , ಗೋವಿಂದ ಕಾರಜೋಳ

ಫೋನ್ ಟ್ಯಾಪಿಂಗ್ ಪ್ರಕರಣ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕರು ಹಾಗು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಆಗ್ರಹಿಸಿದ್ದಾರೆ ಎಂದರು.

ಬಹಳ ನುರಿತ ರಾಜಕಾರಣಿಯಾಗಿ ಸಿಎಂ ಬಿಎಸ್‌ವೈ, ಈ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರೆ. ಪ್ರಕರಣ ಪಾರದರ್ಶಕವಾಗಿ ತನಿಖೆಯಾಗಲಿ ಎಂದು ಅವರು ಸಿಬಿಐಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಇದೇ ವೇಳೆ ಮಾತನಾಡಿದ ಗೋವಿಂದ ಕಾರಜೋಳ, ಟೆಲಿಫೋನ್ ಕದ್ದಾಲಿಕೆ ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಸಿದ್ದರಾಮಯ್ಯ, ಖರ್ಗೆ ಸೇರಿದಂತೆ ಸಾಕಷ್ಟು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ರು.

ABOUT THE AUTHOR

...view details