ಕರ್ನಾಟಕ

karnataka

ETV Bharat / state

ಫೋನ್ ಕದ್ದಾಲಿಕೆ ಪ್ರಕರಣ: ಸಿಸಿಬಿಯಿಂದ ಸಿಬಿಐಗೆ ಕೇಸ್​ ಫೈಲ್​ ಹಸ್ತಾಂತರ - cbi investigation

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಸಿಬಿಯಿಂದ ಸಿಬಿಐಗೆ ಹಸ್ತಾಂತರಿಸಲಾಗಿದೆ. 1 ಸಾವಿರಕ್ಕೂ ಹೆಚ್ಚು ಪುಟಗಳ ಕಡತಗಳನ್ನು ಪಡೆದು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಲಾಗಿದೆ.

ಫೋನ್​ ಕದ್ದಾಲಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ

By

Published : Aug 29, 2019, 10:56 AM IST

ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನು ಈಗಾಗಲೇ ಸಿಬಿಐಗೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಸಿಸಿಬಿ ನಡೆಸಿದ ತನಿಖಾ ವರದಿಯ ಪಟ್ಟಿಯನ್ನು ಸಿಬಿಐ ಪಡೆದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಫೋನ್​ ಕದ್ದಾಲಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ

ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಕಮೀಷನರ್ ಆಗಲು ಲಾಬಿ ನಡೆಸಿದ್ದಾರೆ ಎನ್ನಲಾದ ಆಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಯ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್​ಗೆ ವಹಿಸಲಾಗಿತ್ತು. ತನಿಖೆ ವೇಳೆ ಹಿರಿಯ ಐಪಿಎಸ್ ಹಾಗೂ ರಾಜಾಕಾರಣಿಗಳ ಫೋನ್​ ಟ್ಯಾಪಿಂಗ್ ಆಗಿರುವ ವಿಚಾರ ಬೆಳಕಿಗೆ ಬಂದಿದ್ದು, ನಂತರ ತನಿಖಾ ವರದಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರಿಗೆ ನೀಡಲಾಯಿತು. ಅವರು ಸರ್ಕಾರಕ್ಕೆ ಈ ಕುರಿತು ವರದಿ ಸಲ್ಲಿಸಿದ್ದರು.

ಸರ್ಕಾರ ಪ್ರಕರಣದ ಗಂಭೀರತೆ ಅರಿತು ಸಿಬಿಐಗೆ ವರ್ಗಾವಣೆ ಮಾಡಿತು. ಸದ್ಯ ಸಿಬಿಐ ಸುಮಾರು 1 ಸಾವಿರಕ್ಕೂ ಹೆಚ್ಚು ಪುಟಗಳ ಕಡತ ಪಡೆದು ತನಿಖೆ ಕೈಗೆತ್ತಿಕೊಂಡಿದೆ ಎನ್ನಲಾಗ್ತಿದೆ.

ABOUT THE AUTHOR

...view details