ಕರ್ನಾಟಕ

karnataka

ETV Bharat / state

ಜಿಲ್ಲಾ ನ್ಯಾಯಾಲಯಗಳಲ್ಲಿ ಫಿಸಿಕಲ್ ಕಲಾಪ: ಹೈಕೋರ್ಟ್ ಸ್ಪಷ್ಟನೆ

ಜಿಲ್ಲಾ ನ್ಯಾಯಾಲಯಗಳಲ್ಲಿ ಫಿಸಿಕಲ್​​ ಕಲಾಪ ನಡೆಸಲು ಹೈಕೋರ್ಟ್​ ಆದೇಶ ನೀಡಿದ್ದು, ನಾಳೆಯಿಂದ ಶೇ. 75 ರಷ್ಟು ಕೋರ್ಟ್​ಗಳು ಕಾರ್ಯಾರಂಭಗೊಳ್ಳಲಿವೆ.

ಹೈಕೋರ್ಟ್
ಹೈಕೋರ್ಟ್

By

Published : Aug 31, 2020, 8:27 PM IST

ಬೆಂಗಳೂರು:ರಾಜ್ಯದ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ನಾಳೆಯಿಂದ ಶೇ. 75 ರಷ್ಟು ಕೋರ್ಟ್​ಗಳು ಕಾರ್ಯಾರಂಭಗೊಳ್ಳಲಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಈ ಕುರಿತು ಮುಖ್ಯ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಚ್ರಾರ್ ಜನರ್ ಆದೇಶ ಹೊರಡಿಸಿದ್ದು, ರಾಜ್ಯದ ನ್ಯಾಯಾಲಯಗಳಲ್ಲಿ ಅದರಲ್ಲೂ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಫಿಸಿಕಲ್ ವಿಚಾರಣೆಗೆ ಅವಕಾಶವಿಲ್ಲ ಎಂಬ ತಪ್ಪು ಅಭಿಪ್ರಾಯ ಒಂದಷ್ಟು ವಕೀಲ ಸಮುದಾಯದಲ್ಲಿದೆ. ಆದರೆ ಕಾಲಕಾಲಕ್ಕೆ ಎಸ್ಓಪಿ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ್ದು, ವಿಚಾರಣಾ ನ್ಯಾಯಾಲಯಗಳಲ್ಲಿ ವಕೀಲರು ಭೌತಿಕ ವಿಚಾರಣೆಗಳಲ್ಲಿ ಭಾಗಿಯಾಗಬಹುದಾಗಿದೆ. ಸಾಕ್ಷಿದಾರರ ವಿಚಾರಣೆಗೆ ಹಾಗೂ ಹೇಳಿಕೆ ದಾಖಲಿಸಿಕೊಳ್ಳಲು ಮಾತ್ರ ವಿಡಿಯೋ ಕಾನ್ಫರೆನ್ಸ್ ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ನಾಳೆಯಿಂದ ರಾಜ್ಯಾದ್ಯಂತ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳಲ್ಲಿ ಶೇ.75 ರಷ್ಟು ನ್ಯಾಯಾಂಗ ಅಧಿಕಾರಿಗಳು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಎಸ್ಓಪಿ ಮಾರ್ಗಸೂಚಿಗಳಂತೆ ವಿಚಾರಣಾ ನ್ಯಾಯಾಲಯಗಳಲ್ಲಿ ಪ್ರತಿದಿನ ತಲಾ 30 ಪ್ರಕರಣಗಳನ್ನು ವಿಚಾರಣೆಗೆ ನಿಗದಿಪಡಿಸಲಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ABOUT THE AUTHOR

...view details