ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಶಾಲಾ-ಕಾಲೇಜಿನಲ್ಲಿ ಭೌತಿಕ ತರಗತಿ ಆರಂಭವಾಗಲಿವೆ. ವಿದ್ಯಾರ್ಥಿಗಳ ಶಿಕ್ಷಣದ ಹಿತದೃಷ್ಟಿಯಿಂದ ಮೊದಲ ಹಂತವಾಗಿ 9, 10, 11 ಮತ್ತು 12ನೇ ತರಗತಿಗಳಿಗೆ ಪಾಠ ನಡೆಯಲಿದೆ.
ಈಗಾಗಲೇ ರಾಜ್ಯಾದ್ಯಂತ ಶಾಲೆಗಳಲ್ಲಿನ ಬೋಧನಾ ಕೊಠಡಿ, ಪ್ರಯೋಗಾಲಯಗಳು ಇನ್ನಿತರ ಸ್ಥಳಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ‘ಬನ್ನಿ ಮಕ್ಕಳೇ ಮರಳಿ ಶಾಲೆಗೆ, ನಿಮ್ಮ ಸುರಕ್ಷತೆಯ ಜವಾಬ್ದಾರಿ ನಮ್ಮದು’ ಎಂದು ಟ್ಯಾಗ್ ಲೈನ್ ಮೂಲಕ ಭರವಸೆ ಮೂಡಿಸಲಾಗಿದೆ.
ಐದು ಜಿಲ್ಲೆಗಳಲ್ಲಿ ಶಾಲೆ-ಕಾಲೇಜು ಆರಂಭ ಇಲ್ಲ:
ಕೋವಿಡ್ ಸೋಂಕು ಪ್ರಸರಣ ಪ್ರಮಾಣ ಶೇ 2ಕ್ಕಿಂತ ಹೆಚ್ಚಿಗೆ ಇರುವ ಜಿಲ್ಲೆಗಳಾದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಹಾಸನ ಹಾಗು ಕೊಡಗಿನಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳ ಆರಂಭ ಇಲ್ಲ.
ಶಾಲೆಗಳ ಆರಂಭಕ್ಕೆ ಇರುವ ಗೈಡ್ ಲೈನ್ಸ್:
- ಶಾಲೆಯಲ್ಲಿ ಎರಡಕ್ಕಿಂತ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದರೆ ಒಂದು ವಾರ ಶಾಲೆ ಸೀಲ್ ಡೌನ್
- ಎರಡಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಶಾಲೆಗಳು ಬಂದ್
- ಕೊರೊನಾ ಲಕ್ಷಣ ಕಂಡುಬರುವ ಮಗುವಿಗೆ ಶಾಲೆಯ ಪ್ರವೇಶ ಇರುವುದಿಲ್ಲ
- ಶಾಲಾ-ಕಾಲೇಜುಗಳಲ್ಲಿ ಕಡ್ಡಾಯ ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು
- ಶಿಕ್ಷಕರಿಗೆ ಹಾಗೂ ಶಾಲಾ ಸಿಬ್ಬಂದಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿರಬೇಕು
- ತರಗತಿ ಹಾಜರಾತಿಗೆ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು
- ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಇಲ್ಲ. ಆನ್ಲೈನ್ ಹಾಗೂ ಆಫ್ಲೈನ್ ತರಗತಿಗೆ ಅವಕಾಶ
- ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಕಲಿಕೆಗೆ ಅವಕಾಶ
- ವಸತಿ ಶಾಲೆಗಳಲ್ಲಿ ಹಾಗೂ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 72 ಗಂಟೆಗಳ ಒಳಗಿನ ನೆಗಟಿವ್ ರಿಪೋರ್ಟ್ ಸಲ್ಲಿಸಬೇಕು.
- ಶಾಲೆಗಳು ಇಡೀ ಆವರಣವನ್ನು ಸ್ಯಾನಿಟೈಸ್ ಮಾಡಬೇಕು, ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು
- ಶೌಚಾಲಯ, ಶಾಲೆಯ ಕೊಠಡಿ, ಅಡುಗೆ ದಾಸ್ತಾನು ಎಲ್ಲವನ್ನೂ ಸ್ವಚ್ಛಗೊಳಿಸಬೇಕು.
ಐಡಿ ಕಾರ್ಡ್ ತೋರಿಸಿದ್ರೆ ಉಚಿತ ಪ್ರಯಾಣ
ವಿದ್ಯಾರ್ಥಿಗಳು ಶಾಲಾವಧಿಯಲ್ಲಿ ಹಳೆಯ ಸ್ಮಾರ್ಟ್ ಕಾರ್ಡ್ ಪಾಸ್ನಲ್ಲೇ ಓಡಾಡಬಹುದು. ಪಾಸ್ ಇಲ್ಲದೇ ಇರುವವರು, ಶಾಲಾ-ಕಾಲೇಜಿನ ಐಡಿ ಕಾರ್ಡ್ ಅಥವಾ ಶುಲ್ಕದ ರಸೀದಿ ತೋರಿಸಿ ಸಂಚರಿಸಬಹುದಾಗಿದೆ. ಸರ್ಕಾರದ ಮುಂದಿನ ಆದೇಶವರೆಗೆ ವಿದ್ಯಾರ್ಥಿಗಳ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ : ಶಾಸಕ ಜಮೀರ್