ಬೆಂಗಳೂರು:ನಂಜನಗೂಡು ತಾಲೂಕಿನ ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಕೆಪಿಸಿಸಿ ವೈದ್ಯ ಘಟಕದ ವತಿಯಿಂದ ಇಂದು ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಸಲಾಯಿತು.
ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ಕೆಪಿಸಿಸಿ ವೈದ್ಯ ಘಟಕದಿಂದ ಪ್ರತಿಭಟನೆ
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ವೈದ್ಯ ಘಟಕದಿಂದ ಕ್ಯಾಂಡಲ್ ಲೈಟ್ ಪ್ರತಿಭಟನೆ
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಸಲೀಂ ಅಹಮದ್, ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ. ಈ ರೀತಿ ಆಗಬಾರದಿತ್ತು, ಮೇಲಧಿಕಾರಿಗಳ ಒತ್ತಡದಿಂದ ಹೀಗೆ ಆಗಿದೆ. ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಅವರನ್ನು ತನಿಖೆ ಮಾಡಿ ಶಿಕ್ಷೆ ಕೊಡಿ ಎಂದು ಆಗ್ರಹಿಸಿದರು.