ಬೆಂಗಳೂರು:ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯ ಸಂಗತಿ ತಿಳಿಯಲು ತನಿಖೆಗೆ ಆದೇಶ ಮಾಡಿದ್ದೇನೆ. ಸಮಗ್ರ ತನಿಖೆ ಮಾಡಿ ಸತ್ಯ ಸಂಗತಿ ತಿಳಿಯೋ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕೆಆರ್ಎಸ್ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ರೂ. ನೀಡಲಾಗುತ್ತಿದೆ. ಅವರ ಕುಟುಂಬದವರಿಗೆ ಸರ್ಕಾರಿ ನೌಕರಿ ಕೊಡಲು ಸೂಚನೆ ನೀಡಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟು
ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಬಿಜೆಪಿ ತನಿಖೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಸತ್ಯ ಸಂಗತಿ ಬಂದ ಮೇಲೆ ಅವರಿಗೆ ಎಲ್ಲ ತಿಳಿಯುತ್ತಿದೆ. ತನಿಖೆ ಮೂಲಕ ಸತ್ಯ ಸಂಗತಿ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ನಮಗೇನೂ ರಾಜಕೀಯ ಮಾಡೋ ಅವಶ್ಯಕತೆ ಇಲ್ಲ. ತನಿಖೆಯಿಂದ ಅನೇಕ ಘಟನೆಗಳು ಹೊರಗೆ ಬರುತ್ತವೆ ಎಂದರು.