ಬೆಂಗಳೂರು:ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಎಸ್.ವಿದ್ಯಾಶಂಕರ್ ಅವರನ್ನು ನೇಮಕ ಮಾಡಿರುವ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಡಿ.2ರಂದು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ.
ಮೈಸೂರು ವಿವಿಯ ಮಾಜಿ ಹಂಗಾಮಿ ಉಪಕುಲಪತಿ ಹಾಗೂ ನಿವೃತ್ತ ಪ್ರೊ. ಬಿ. ಶಿವರಾಜ್ ಸಲ್ಲಿಸಿದ್ದ ಅರ್ಜಿಯು ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.
ವಿಚಾರಣೆ ವೇಳೆ, ಸೇವಾ ವಿಚಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸ್ವೀಕಾರಾರ್ಹವಲ್ಲ. ಜೊತೆಗೆ ಅರ್ಜಿದಾರರು ಕುಲಪತಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೂ ಸಹ ಸುಪ್ರೀಂ ಕೋರ್ಟ್‌ನ ಆದೇಶದಂತೆ ನೇಮಕದಿಂದ ಭಾದಿತರಾಗದವರು ಅದನ್ನು ಪ್ರಶ್ನಿಸುವಂತಿಲ್ಲ ಎಂದು ಹೇಳಿದ ನ್ಯಾಯಪೀಠ, ಡಿ.2ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ಮುಂದೂಡಿದೆ.