ಬೆಂಗಳೂರು:ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಸರ್ಕಾರ ವಿಜಯನಗರ ಜಿಲ್ಲೆ ರಚನೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನ ಹೈಕೋಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ಸರ್ಕಾರ ಕರಡು ಅಧಿಸೂಚನೆಯನ್ನಷ್ಟೇ ಹೊರಡಿಸಿದೆ. ನೀತಿ ಸಂಹಿತೆ ವಿಚಾರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದು ಎಂದು ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ್ ವಾದ ಮಂಡಿಸಿದರು.