ಕರ್ನಾಟಕ

karnataka

ETV Bharat / state

ಡಿ.ಜೆ. ಹಳ್ಳಿ ಗಲಭೆ ಎನ್ಐಎ ತನಿಖೆಗೆ ವಹಿಸಲು ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಈ ಕುರಿತು ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹೈಕೋರ್ಟ್
ಹೈಕೋರ್ಟ್

By

Published : Aug 25, 2020, 2:03 PM IST

ಬೆಂಗಳೂರು: ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಗಿರೀಶ್ ಭಾರದ್ವಾಜ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ರಾಷ್ಟ್ರೀಯ ತನಿಖಾ ದಳಕ್ಕೆ(ಎನ್ಐಎ) ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಶ್ರೀಧರ್ ಪ್ರಭು ವಾದಿಸಿ, ಪ್ರಕರಣ ಗಂಭೀರ ಸ್ವರೂಪದ್ದಾಗಿದೆ. ಹಾಗೆಯೇ ಸಂಕೀರ್ಣವಾಗಿದ್ದು, ಗಲಭೆಯಲ್ಲಿ ಹೊರಗಿನ ವಿದ್ವಂಸಕ ಶಕ್ತಿಗಳು ಭಾಗಿಯಾಗಿರುವ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ಗಲಭೆ ಪ್ರಕರಣವನ್ನು ಸ್ಥಳೀಯ ತನಿಖಾ ತಂಡಕ್ಕೆ ವಹಿಸುವ ಬದಲು ಎನ್ಐಎಗೆ ವಹಿಸಬೇಕೆಂದು ಕೋರಿದರು.

ABOUT THE AUTHOR

...view details