ಕರ್ನಾಟಕ

karnataka

ETV Bharat / state

ಏರ್ ಶೋ ಪಾರ್ಕಿಂಗ್‌ ಅವಘಡ: ವರದಿ ಕೇಳಲು ನಿರ್ದೇಶಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ - ಬೆಂಗಳೂರು ಏರ್ ಶೋ

ಫೆ.23 ರಂದು ಬೆಂಗಳೂರು ಏರ್ ಶೋ ಸಂದರ್ಭದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಸುಮಾರು 400ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿದ್ದವು. ಈ ಘಟನೆ ಕುರಿತು ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ನೀಡಲು ನಿರ್ದೇಶಿಸಬೇಕೆಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

ಏರ್ ಶೋ ಪಾರ್ಕಿಂಗ್‌

By

Published : Oct 1, 2019, 10:33 AM IST

ಬೆಂಗಳೂರು:ಯಲಹಂಕದ ಏರೋ ಇಂಡಿಯಾದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ನೀಡಲು ನಿರ್ದೇಶಿಸಬೇಕೆಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

ಏರ್ ಶೋ ಪಾರ್ಕಿಂಗ್‌ನಲ್ಲಿ ನಡೆದಿದ್ದ ಬೆಂಕಿ ಅನಾಹುತ

ಈ ಕುರಿತು ನಗರದ ನಿವಾಸಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ, ವಕೀಲೆ ಗೀತಾ ಮಿಶ್ರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು ಇನ್ನಷ್ಟೇ ಅರ್ಜಿ ವಿಚಾರಣೆಗೆ ಬರಬೇಕಿದೆ.

ಫೆ.23 ರಂದು ಬೆಂಗಳೂರು ಏರ್ ಶೋ ಸಂದರ್ಭದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಸುಮಾರು 400ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿದ್ದವು. ಯಾರೋ ಕಿಡಿಗೇಡಿಗಳು ಧೂಮಪಾನ ಮಾಡಿ ಕಡ್ಡಿ ಬಿಸಾಕಿದ್ದರಿಂದ ಅದು ಒಣ ಹುಲ್ಲಿನ ಮೇಲೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿತ್ತು. ಆದರೆ‌ ಯಾವುದೇ ನಿಖರವಾದ ಕಾರಣ ತಿಳಿದಿರಲಿಲ್ಲ. ಅಗ್ನಿ ಅವಘಡದ ತನಿಖೆಗೆ ಕೋರ್ಟ್ ವಿಚಾರಣಾ ಕಾಯ್ದೆಯಡಿ ನ್ಯಾಯಾಂಗ ಆಯೋಗವನ್ನು ರಚಿಸಬೇಕು. ಹಾಗೂ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿ ನೀಡಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ABOUT THE AUTHOR

...view details