ಬೆಂಗಳೂರು :ಲಾಕ್ಡೌನ್ ಬಳಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಗುಮಾಸ್ತರಿಗೆ ನೆರವು ನೀಡಲು ಯೋಜನೆಯೊಂದನ್ನು ಸಿದ್ಧಪಡಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದೆ.
ಕ್ಲರ್ಕ್ಗಳಿಗೆ ನೆರವು ಕೋರಿ ಪಿಐಎಲ್.. ಯೋಜನೆ ರೂಪಿಸಿರುವುದಾಗಿ ಹೈಕೋರ್ಟ್‌ಗೆ ಮಾಹಿತಿ.. - assistance to Clerks
ಗುಮಾಸ್ತರಿಗೆ ಪರಿಹಾರ ಕಲ್ಪಿಸುವುದಕ್ಕೆ ಯೋಜನೆ ರೂಪಿಸಲು ಹಿರಿಯ ವಕೀಲ ಡಿಎಲ್‌ಎನ್ ರಾವ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ಈಗಾಗಲೇ ಯೋಜನೆ ಸಿದ್ಧಪಡಿಸಿದೆ.
ಕ್ಲರ್ಕ್ಗಳಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ವಕೀಲರ ಪರಿಷತ್‌ಗೆ ನಿರ್ದೇಶಿಸಬೇಕು ಎಂದು ಕೋರಿ, ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್‌ಗಳ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಪರಿಷತ್ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಗುಮಾಸ್ತರಿಗೆ ಪರಿಹಾರ ಕಲ್ಪಿಸುವುದಕ್ಕೆ ಯೋಜನೆ ರೂಪಿಸಲು ಹಿರಿಯ ವಕೀಲ ಡಿಎಲ್‌ಎನ್ ರಾವ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ಈಗಾಗಲೇ ಯೋಜನೆ ಸಿದ್ಧಪಡಿಸಿದೆ. ಗುಮಾಸ್ತರಿಗೆ ಪರಿಹಾರ ಹಣ ಹಂಚಿಕೆ ಮಾಡಲು ಶೀಘ್ರವೇ ಎಲ್ಲ ಕ್ರಮ ಜರುಗಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.