ಬೆಂಗಳೂರು:ಇತ್ತೀಚೆಗಷ್ಟೇ ಕಬ್ಬನ್ ಪಾರ್ಕ್‌ನಲ್ಲಿ ಕಟ್ಟಡ ನಿರ್ಮಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಬ್ಬನ್ ಉದ್ಯಾನವನದ ನಡಿಗೆದಾರರ ಸಂಘ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದೆ.
ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ - ಹೈಕೋರ್ಟ್‌ಗೆ ಪಿಐಎಲ್
ಬೆಂಗಳೂರಿನ ಪ್ರಸಿದ್ಧ ಕಬ್ಬನ್ ಪಾರ್ಕ್‌ನಲ್ಲಿ 7 ಅಂತಸ್ಥಿನ ಕಟ್ಟಡ ನಿರ್ಮಿಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ.
ಕಬ್ಬನ್ ಪಾರ್ಕ್‌ನಲ್ಲಿ ಈಗ ಹಾಕಿಕೊಂಡಿರುವ ಯೋಜನೆಯಂತೆ ಬೃಹತ್ ಕಟ್ಟಡ ನಿರ್ಮಾಣ ಮಾಡಲು ಅನುಮತಿ ನೀಡಿರುವುದರ ಪರಿಣಾಮ ಕಬ್ಬನ್ ಉದ್ಯಾನವನದ ಪರಿಸರ ಹಾಳಾಗುತ್ತದೆ. ಒಳ್ಳೆಯ ಗಾಳಿ ಮತ್ತು ವಾತಾವರಣಕ್ಕೆ ಜನರು ಕಬ್ಬನ್ ಪಾರ್ಕ್ ಕಡೆ ಬರುತ್ತಿದ್ದು, ಇದರಿಂದ ಮತ್ತಷ್ಟು ಸಮಸ್ಯೆಗಳು ಉದ್ಭಬವವಾಗುವ ಕಾರಣ ಈ ಕೂಡಲೇ ನ್ಯಾಯಪೀಠವು ಸರ್ಕಾರದ ಪ್ರಸ್ತಾವನೆಗೆ ನೀಡಿರುವ ಅನುಮತಿ ಆದೇಶವನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿಯಲ್ಲಿ ರಾಜ್ಯ ನಗರಾಭಿವದ್ಧಿ ಇಲಾಖೆಯ ಕಾರ್ಯದರ್ಶಿ, ತೋಟಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಬ್ಬನ್ ಪಾರ್ಕ್ ಉಪ ನಿರ್ದೇಶಕರು, ಬಿಡಿಎ ಮತ್ತು ಬಿಬಿಎಂಪಿ ಆಯುಕ್ತರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.