ಬೆಂಗಳೂರು: ಹರಿದ್ವಾರ ಕುಂಭಮೇಳದಲ್ಲಿ ಭಾಗಿಯಾಗಿದ್ದ ಯಾತ್ರಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಯಾತ್ರಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಸ್ವಯಂ ತಪಾಸಣೆಗೆ ಒಳಗಾಗುವಂತೆ ಮನವಿ ಮಾಡಿದೆ.
ಇದನ್ನೂ ಓದಿ:ಕೊರೊನಾ ಮರೆತ ಭಕ್ತರು: ನಿನ್ನೆ ಗಂಗೆಯಲ್ಲಿ 'ಶಾಹಿ ಸ್ನಾನ' ಮಾಡಿದ್ದು ಬರೋಬ್ಬರಿ 35 ಲಕ್ಷ ಮಂದಿ!
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ನಂತರವಷ್ಟೆ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮತ್ತೆ ಕಾಣಿಸಿಕೊಂಡ ಜ್ವರ: ರೋಡ್ ಶೋ ಮೊಟಕುಗೊಳಿಸಿದ ಸಿಎಂ ಬಿಎಸ್ವೈ