ಕರ್ನಾಟಕ

karnataka

ETV Bharat / state

ನೆಲಮಂಗಲ: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ! - ಪ್ಲಾಸ್ಟಿಕ್ ಅಕ್ಕಿ ಪತ್ತೆ

ಸರ್ಕಾರದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಆನಂದ ನಗರ ಹಾಗೂ ಅಲ್ಲಾಸಂದ್ರ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Plastic rice found in ration rice
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

By

Published : Jan 8, 2023, 1:14 PM IST

ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ ಪ್ರಕರಣ- ಪ್ರತಿಕ್ರಿಯೆ

ನೆಲಮಂಗಲ:ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ? ಹೌದು, ಈ ಘಟನೆ ನೆಲಮಂಗಲ ತಾಲೂಕಿನ ಆನಂದ ನಗರದಲ್ಲಿ ನಡೆದಿದೆ. ಇಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಅಕ್ಕಿ ಪಡೆದೊಯ್ದಿದ್ದ ಮೂವರು ಫಲಾನುಭವಿಗಳ ಮನೆಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಕ್ಕಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಅಕ್ಕಿಯ ಮಾದರಿಯನ್ನು ಪರೀಕ್ಷೆಗೆ ಆಹಾರ ಇಲಾಖೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಾಸಂದ್ರ ಗ್ರಾಮದಲ್ಲಿಯೂ ಮೂರು ಮನೆಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ. ಸದ್ಯ ನ್ಯಾಯಬೆಲೆ ಅಂಗಡಿಗೆ ಬಂದಿದ್ದ ಅಕ್ಕಿಯ ಮೂಟೆಗಳನ್ನು ವಾಪಸ್ ಕಳುಹಿಸಲಾಗಿದೆ ಎಂದು ನ್ಯಾಯ ಬೆಲೆ ಅಂಗಡಿಯ ವಿತರಕ ಹನುಮಂತರಾಜು ತಿಳಿಸಿದ್ದಾರೆ.

ಕಲಬೆರಕೆ ಅಕ್ಕಿಯನ್ನು ಅಧಿಕಾರಿಗಳು ಸರಬರಾಜು ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಆಹಾರ ಇಲಾಖೆಯ ಅಧಿಕಾರಿಗಳನ್ನ ಸಂಪರ್ಕಿಸಿದರೆ, ಪ್ಲಾಸ್ಟಿಕ್ ರೀತಿಯ ಅಕ್ಕಿಯನ್ನು ಲ್ಯಾಬ್​ಗೆ ಕಳುಹಿಸಿದ್ದೇವೆ. ನಂತರ ಈ ಬಗ್ಗೆ ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಪಡಿತರ ಚೀಟಿಗೆ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

ABOUT THE AUTHOR

...view details