ಕರ್ನಾಟಕ

karnataka

ETV Bharat / state

ಕೋವಿಡ್ -19 : ಮತ್ತೊಮ್ಮೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ - ಕೋವಿಡ್ -19 ಸಾಂಕ್ರಾಮಿಕ

ರೈಲು ಸೇವೆಗಳು ಹಂತ ಹಂತವಾಗಿ ಪ್ರಾರಂಭವಾಗುತ್ತಿರುವ ವೇಳೆಯಲ್ಲಿಯೇ ಈಗ ಕಾಯ್ದಿರಿಸದ ಟಿಕೆಟ್ ಕೌಂಟರ್‌ಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳಿಗೆ ಬೆಲೆ ಹೆಚ್ಚಿಸಲಾಗಿದೆ.

Platform ticket price hike once again
ಮತ್ತೊಮ್ಮೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ

By

Published : Apr 16, 2021, 6:50 PM IST

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ದಿಂದಾಗಿ ದೇಶವು ತತ್ತರಿಸುತ್ತಿದ್ದು, ರೈಲು ಸೇವೆಗಳು ಹಂತ ಹಂತವಾಗಿ ಪ್ರಾರಂಭವಾಗುತ್ತಿರುವ ವೇಳೆಯಲ್ಲಿಯೇ ಈಗ ಕಾಯ್ದಿರಿಸದ ಟಿಕೆಟ್ ಕೌಂಟರ್‌ಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಉಂಟಾಗುತ್ತಿದೆ.

ಕೋವಿಡ್ -19 ಹರಡುವುದನ್ನು ನಿಯಂತ್ರಿಸಲು ನೈರುತ್ಯ ರೈಲ್ವೆ ವಿಭಾಗವು ಮುನ್ನೆಚ್ಚರಿಕಾ ಕ್ರಮವಾಗಿ ಏಪ್ರಿಲ್ 17ರಿಂದ 30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವ ಸಲುವಾಗಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೃಷ್ಣರಾಜಪುರಂಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ದರವನ್ನು ರೂ .10 ರಿಂದ ರೂ .50 ಕ್ಕೆ ಹೆಚ್ಚಿಸಲಾಗಿದೆ.

ABOUT THE AUTHOR

...view details