ಕರ್ನಾಟಕ

karnataka

ETV Bharat / state

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ, ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸಿ: ಸಿಎಂ ಮನವಿ

ರಾಜ್ಯದಲ್ಲಿ ಕೋವಿಡ್-19​ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ರಾಜ್ಯದ ಜನತೆ ಗಂಭೀರವಾರಿ ಪರಿಗಣಿಸಬೇಕು. ಲಾಕ್‌ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಯಡಿಯೂರಪ್ಪ
Yediyurappa

By

Published : Apr 5, 2020, 3:22 PM IST

ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ಲಾಕ್‌ಡೌನ್ ಆದೇಶವನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿಶ್ವದಾದ್ಯಂತ ಕೋವಿಡ್-19 ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಏಪ್ರಿಲ್ 14 ರವರೆಗೆ ಲಾಕ್‍ಡೌನ್ ಘೋಷಿಸಿದ್ದಾರೆ.

ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ ಹಾಗು ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನ ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಜನತೆ ಲಾಕ್ ಡೌನ್ ನ ಹಿಂದಿನ ಆಶಯವನ್ನು ಹಾಗೂ ಲಾಕ್‌ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನರಿತು ಆದೇಶ ಪಾಲಿಸಬೇಕಾಗಿದೆ ಎಂದು ಎಚ್ಚರಿಸಿದ್ದಾರೆ.

ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಸೂಚಿಸಿರುವ ದೇಶವ್ಯಾಪ್ತಿ ಲಾಕ್‍ಡೌನ್ ಅವಧಿ ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದೆ. ಆದ್ರೆ, ಈ ಲಾಕ್‍ಡೌನನ್ನು ವಿಸ್ತರಿಸಬೇಕೋ, ಬೇಡವೋ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತು ಸಲಹೆ ಸೂಚನೆಗಳನ್ನು ನೀಡುವಂತೆಯೂ ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ABOUT THE AUTHOR

...view details