ಬೆಂಗಳೂರು:ಸಿಎಂ ಕುಮಾರಸ್ವಾಮಿ ಹಾಗೂ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಸಿಎಂ, ಸ್ಪೀಕರ್ ವಿರುದ್ಧ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಕೆ...! - ಸ್ಪೀಕರ್ ರಮೇಶ್ ಕುಮಾರ್
ಸಮ್ಮಿಶ್ರ ಸರ್ಕಾರದ ನಡೆಯ ಕುರಿತು ವಕೀಲ ಆನಂದ ಮೂರ್ತಿ ಎಂಬುವರು ಹೈಕೋರ್ಟ್ಗೆ ಪಿಐಎಲ್ ಸಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಅನಗತ್ಯವಾಗಿ ಸದನದಲ್ಲಿ ವಿಶ್ವಾಸಮತ ಸಾಬೀತುಮಾಡಲು ವಿಳಂಬ ಮಾಡುತ್ತಿದೆ. ಬಹುಮತ ಇಲ್ಲದಿದ್ದರೂ ಕುಮಾರಸ್ವಾಮಿ ಆಡಳಿತದಲ್ಲಿದ್ದಾರೆ. ಪದೇ ಪದೇ ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿ ಮಾತು ತಪ್ಪುತ್ತಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ನಡೆಯ ಕುರಿತು ವಕೀಲ ಆನಂದ ಮೂರ್ತಿ ಎಂಬುವರು ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅನಗತ್ಯವಾಗಿ ಸದನದಲ್ಲಿ ವಿಶ್ವಾಸಮತ ಸಾಬೀತುಮಾಡಲು ವಿಳಂಬ ಮಾಡುತ್ತಿದೆ. ಬಹುಮತ ಇಲ್ಲದಿದ್ದರೂ ಕುಮಾರಸ್ವಾಮಿ ಆಡಳಿತದಲ್ಲಿದ್ದಾರೆ. ಪದೇ ಪದೇ ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿ ಮಾತು ತಪ್ಪುತ್ತಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಸ್ಪೀಕರ್ ಕೂಡ ಸರಿಯಾದ ನಿರ್ಧಾರ ತಿಳಿಸದೆ ದಾರಿ ತಪ್ಪಿಸುತ್ತಿದ್ದಾರೆ. ನಾನು ಓರ್ವ ಸಾಮಾನ್ಯ ವ್ಯಕ್ತಿಯಾಗಿ ಬೇರೆ ದಾರಿ ಕಾಣದೇ ಹೈಕೋರ್ಟ್ ಮೆಟ್ಟಿಲೇರಿದ್ದೇನೆ. ವಿಶ್ವಾಸ ಮತ ಯಾಚನೆ ಸಂಬಂಧ ಸೂಕ್ತ ನಿರ್ದೇಶನ ನೀಡಿ ಎಂದು ಅರ್ಜಿಯಲ್ಲಿ ಆನಂದ ಮೂರ್ತಿ ಮನವಿ ಮಾಡಿದ್ದಾರೆ.