ಕರ್ನಾಟಕ

karnataka

ETV Bharat / state

ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ‌

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6ನೇ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಡೆಸಿದರು.

pm-modi-arrives-to-inaugurate-program-bronze-statue-of-kempegowda-says-cm-bommai
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ‌

By

Published : Oct 6, 2022, 9:58 PM IST

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚಿಸಿದರು.

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6ನೇ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಡೆಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6ನೇ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ ತಾಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನ ಚರಿತ್ರೆಯನ್ನು ಬಿಂಬಿಸುವ ವಿಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದರು.

ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6ನೇ ಸಭೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಡೆಸಿದರು.

ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸಿಎಂ ಸೂಚಿಸಿದರು. ಸಭೆಯಲ್ಲಿ ಸಚಿವರಾದ ಸಿಎನ್ ಅಶ್ವತ್ಥ ನಾರಾಯಣ, ಆರ್.ಅಶೋಕ, ಬಿಡಿಎ ಅಧ್ಯಕ್ಷ ಎಸ್​ಆರ್ ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:150 ಸ್ಥಾನ ಗೆಲ್ಲಲು ರೋಡ್ ಮ್ಯಾಪ್: ಅರುಣ್ ಸಿಂಗ್

ABOUT THE AUTHOR

...view details